ETV Bharat / state

ರೌಡಿಶೀಟರ್ ಬಚ್ಚಾ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

author img

By

Published : Jul 7, 2023, 1:22 PM IST

2017ರಲ್ಲಿ ನಡೆದ ರೌಡಿಶೀಟರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.‌

criminals
ಅಪರಾಧಿಗಳು

ಶಿವಮೊಗ್ಗ: 2017ರಲ್ಲಿ ರೌಡಿಶೀಟರ್ ಅಯಾತ್ ಅಲಿಯಾಸ್ ಬಚ್ಚಾನನ್ನು (19) ಕೊಂದ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿದೆ.‌ 2017ರ ಫೆಬ್ರವರಿ 8ರಂದು‌‌ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿ ಅಣ್ಣನಗರದ ಮಾತೃಶ್ರೀ‌ ಸ್ಟುಡಿಯೋ ಬಳಿ ನಿಂತಿದ್ದ ಬಚ್ಚಾನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಕೀಲಿ ಇಮ್ರಾನ್, ನೋಟು ಕುರ್ರಂ, ಇರ್ಪಾನ್​, ಅಡ್ಡು, ಅಸಾದುಲ್ಲಾ, ಶಾರೂಕ್​, ಅರ್ಬಾಜ್, ಶಾದಾಬ್ ಹಾಗೂ ಆಶುರವರು ಸೇರಿ ತನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಬಚ್ಚಾನ ತಾಯಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಸಿಪಿಐ ಗುರುರಾಜ ಕೆ.ಟಿ ಅವರು ನ್ಯಾಯಾಲಯಕ್ಕೆ ಆರೋಪಿತರ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಶಿವಮೊಗ್ಗ ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿಗಳಾದ ಅರ್ಬಾಜ್ (19), ಶಾರೂಕ್ ಖಾನ್ (19), ಶಾದಾಬ್ (19), ಅಲ್ಯಾಜ್ ಆಶು(19) ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಕೆ.ಮಾನು ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ರೂ ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರಿ ವಕೀಲರಾದ ಶಾಂತರಾಜು ಸರ್ಕಾರದ ಪರ ಮಂಡಿಸಿದ್ದರು.

ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪ: ಮುಜಫರ್‌ಪುರದಲ್ಲಿ ಪತ್ನಿ- ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ಯೋಧ

ಪತ್ನಿ ಕೊಲೆ ಪತಿಗೆ ಜೀವಾವಧಿ ಶಿಕ್ಷೆ: ಮೈಸೂರಿನಲ್ಲಿ 2021 ಫೆ.25ರಂದು ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ಸಲಾಕೆಯಿಂದ ರಮೇಶ ನಾಯಕ ಎನ್ನುವಾತ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 5ನೇ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶವನ್ನು ಪ್ರಕಟಿಸಿದೆ. ಅಪರಾಧಿ ರಮೇಶನು ಕುಡಿತದ ಚಟಕ್ಕೆ ದಾಸನಾಗಿದ್ದು ಪ್ರತಿ ದಿನ ತನ್ನ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದನು.ಈ ಬಗ್ಗೆ ನೆರೆಹೊರೆ ನಿವಾಸಿಗಳು ಸಾಕಷ್ಟು ಬುದ್ಧಿವಾದ ಹೇಳಿದ್ದರು.

ಆದರೆ ರಮೇಶ ತನ್ನ ಚಾಳಿ ಮುಂದುವರೆಸಿದ್ದ. ಕೊನೆಗೆ ಹತ್ಯೆ ಮಾಡಿಯೇ ಬಿಟ್ಟಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಲವರ್ ಈ ಜೀವಾವಧಿ ಶಿಕ್ಷೆಯ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಎಂ. ಎಸ್. ಮಂಜುಳ ವಾದ ಮಂಡಿಸಿದ್ದರು.

ಇದನ್ನೂ ಓದಿ: ನಂಬಿಸಿ ಗರ್ಭಿಣಿಯನ್ನಾಗಿಸಿದ ಆರೋಪ: ಅತ್ತೆ ಮಗನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಳಗಾವಿ: ಪತ್ನಿ, ಪ್ರಿಯಕರನ‌ ಕೊಂದ ಪತಿ... ಜೋಡಿ ಕೊಲೆಗೆ ಬೆಚ್ಚಿಬಿದ್ದ ಗ್ರಾಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.