ETV Bharat / state

Shivamogga crime: ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ - ರೌಡಿಶೀಟರ್ ಕಾಲಿಗೆ ಗುಂಡು

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

police-shot-at-rowdy-sheeter-and-arrested-in-shivamogga
ಶಿವಮೊಗ್ಗ: ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
author img

By

Published : Jul 3, 2023, 7:22 PM IST

ಶಿವಮೊಗ್ಗ: ನಗರದಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ರೌಡಿಶೀಟರ್ ಸೈಫುಲ್ಲಾ ಖಾನ್ ಅಲಿಯಾಸ್​ ಸೈಫು ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ. ಸೋಮವಾರ ಸಂಜೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಪ್ರಕರಣವೊಂದರಲ್ಲಿ ಬಂಧನಕ್ಕೆ ತೆರಳಿದ್ದ ವೇಳೆ ಸೈಫು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ನಾಗರಾಜ್ ಮೇಲೆ ಹಲ್ಲೆ ಮಾಡಲು ರೌಡಿಶೀಟರ್ ಸೈಫು ಯತ್ನಿಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್ಐ ನವೀನ್ ಎಚ್ಚರಿಕೆ ನೀಡಿದ್ದಾರೆ. ಆದರೂ ಮಾತು ಕೇಳದ ಹಿನ್ನೆಲೆ ಸೈಫು ಕಾಲಿಗೆ ಜಯನಗರ ಠಾಣೆ ಪಿಎಸ್ಐ ನವೀನ್ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಸೈಫುನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಜೊತೆಗೆ ಗಾಯಗೊಂಡ ಪೊಲೀಸ್ ಸಿಬ್ಬಂದಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗುಂಡೇಟು ತಿಂದ ರೌಡಿಶೀಟರ್ ಸೈಫುಲ್ಲಾ ಖಾನ್​ ಮೇಲೆ 18 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಶಿವಮೊಗ್ಗದ ದೊಡ್ಡಪೇಟೆ ಠಾಣೆಯೊಂದರಲ್ಲೇ 16 ಕೇಸ್​ಗಳಿವೆ. ತುಂಗಾನಗರ ಹಾಗೂ ಜಯನಗರ ಠಾಣೆಯಲ್ಲಿ ತಲಾ ಒಂದು ಪ್ರಕರಣ ಈತನ ಮೇಲಿದೆ.

ಇದನ್ನೂ ಓದಿ: ಯುವತಿಯ ಮೊಬೈಲ್​ ಕಸಿದು ಪರಾರಿಯಾದ ದುಷ್ಕರ್ಮಿಗಳು.. ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.