ಶಿವಮೊಗ್ಗ: ನಗರದ ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಾಗೃತಿ ಜಾಥಾ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅಪರಾಧ ತಡೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು, ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಸಾರ್ವಜನಿಕರು ನೆರೆ ಹೊರೆಯವರೊಂದಿಗೆ ಉತ್ತಮ ಸಂಬಂಧದಿಂದ ಇರುವುದು, ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದರ ಬಗ್ಗೆ ಜಾಥಾದಲ್ಲಿ ಸಾರ್ವಜನಿಕರಿಗೆ ತಿಳಿಸಿದರು.