ಶಿವಮೊಗ್ಗ : ನಿಷೇಧಾಜ್ಞೆ ಕಡಿತಗೊಳಿಸಿರುವುದರಿಂದ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಇದರ ನಡುವೆ ಮುಂಜಾಗೃತಾ ಕ್ರಮವಾಗಿ ನಗರದ ವಿವಿಧೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಗರದಲ್ಲಿ ಇಂದು ಬೆಳಗ್ಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ವ್ಯಾಪಾರ-ವಹಿವಾಟು ಆರಂಭವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ.
ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು.
ಇದನ್ನೂ ಓದಿ : ತನಗೆ ಸಹಕರಿಸುತ್ತಿಲ್ಲ ಎಂದು ಹೆಂಡತಿಯನ್ನೇ ಕೊಂದು ಮಚ್ಚಿನ ಸಮೇತ ಪೊಲೀಸರಿಗೆ ಶರಣಾದ ಗಂಡ
ಇದರಿಂದಾಗಿ ನಾಲ್ಕೈದು ದಿನಗಳಿಂದ ಶಿವಮೊಗ್ಗ ನಗರ ಸ್ಥಬ್ದವಾಗಿತ್ತು. ಆದರೆ, ಕಳೆದೆರಡು ದಿನಗಳಿಂದ ನಗರದಲ್ಲಿ ಜನ ಜೀವನ ಸಹಜಸ್ಥಿತಿಗೆ ಮರಳಿದೆ. ಹಾಗಾಗಿ, ಇಂದಿನಿಂದ ಕರ್ಫ್ಯೂ ಸಡಿಲಿಸಲಾಗಿದೆ.