ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆ 1961ಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಮುಂದಾಗಿರುವುದನ್ನು ತಡೆದು ಚರ್ಚೆಗೊಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದು ಖಂಡನಾರ್ಹ. ಈ ಕಾಯ್ದೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳಿಗೆ ಮತ್ತು ಕಾರ್ಪೋರೇಟ್ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಆಹ್ವಾನ ನೀಡಿ ಕೃಷಿ ಹೆಸರಿನಲ್ಲಿ ಜಮೀನುಗಳನ್ನು ಬಂಡವಾಳಶಾಹಿಗಳಿಗೆ ಹಸ್ತಾಂತರಿಸುವ ಹುನ್ನಾರವಾಗಿದೆ. ಕೈಗಾರಿಕಾ ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕೆಗಳಿಗೆ ನೀಡಲಾಗಿದೆ. ಇದು ಹೀಗೆಯೇ ಮುಂದುವರೆದರೆ ವ್ಯವಸಾಯಕ್ಕೆ ಕನಿಷ್ಠ ಭೂಮಿಯೂ ಉಳಿಯುವುದಿಲ್ಲ. ಹಾಗಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.