ETV Bharat / state

ಪ್ರವಾಹ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ನಡೆಸಿ: ಅಧಿಕಾರಿಗಳಿಗೆ ಡಿಸಿ ಖಡಕ್​ ಸೂಚನೆ

ನೆರೆ ಪರಿಹಾರ ಕುರಿತಾಗಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಿ ಶೀಘ್ರವಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಸಿ, ಜನಪ್ರತಿನಿಧಿಗಳ ಪ್ರವಾಹ ಸಭೆ
author img

By

Published : Aug 23, 2019, 11:38 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಉಂಟಾಗಿರುವ ಹಾನಿಯ ಕುರಿತಾಗಿ ಸಮರ್ಪಕವಾಗಿ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಹೊಸ ಸಭಾಂಗಣದಲ್ಲಿ ಪ್ರವಾಹ ಪರಿಹಾರ ಕ್ರಮಗಳ ಕುರಿತಾಗಿ ಕರೆಯಲಾಗಿದ್ದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ನೆರೆ ಪರಿಹಾರ ಕಾರ್ಯಗಳಿಗಾಗಿ ಪ್ರತಿ ತಹಶೀಲ್ದಾರ್ ಖಾತೆಗೆ ತಲಾ 50ಲಕ್ಷ ರೂ. ಒಂದೆರಡು ದಿನಗಳಲ್ಲಿ ಜಮಾ ಮಾಡಲಾಗುವುದು ಎಂದು ಹೇಳಿದರು.

ಡಿಸಿ, ಜನಪ್ರತಿನಿಧಿಗಳ ಪ್ರವಾಹ ಸಭೆ

ಪರಿಹಾರ ಕಾರ್ಯ ತ್ವರಿತಗೊಳಿಸಲು ಸೂಚನೆ

ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಗೀಡಾಗಿರುವ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾಗೂ ಪೂರ್ಣ ಹಾಗೂ ಭಾಗಶಃ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ನೀಡುವ ಕಾರ್ಯವನ್ನು ಇನ್ನಷ್ಟು ತ್ವರಿತಗೊಳಿಸಬೇಕು. ಹಾನಿ ಸಮೀಕ್ಷೆ ಸರಿಯಾಗಿ ಮಾಡಬೇಕು. ಹಾನಿಗೀಡಾದ ಪ್ರತಿಯೊಬ್ಬರಿಗೂ ಸಮರ್ಪಕ ಪರಿಹಾರ ಸಿಗುವಂತೆ ಖಾತ್ರಿಪಡಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.

ತೀರ್ಥಹಳ್ಳಿ ತಾಲೂಕಿನಲ್ಲಿ ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಮನೆಗಳ ಮತ್ತು ಕೃಷಿ ಮತ್ತು ತೋಟಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾಗಿ ಸಮೀಕ್ಷೆ ನಡೆಸಲಾಗಿಲ್ಲ. ತೀರ್ಥಹಳ್ಳಿಯಲ್ಲಿ ಕೆಲವು ಮನೆಗಳು ಸಂಪೂರ್ಣ ಕುಸಿದಿದ್ದರೂ ಅದನ್ನು ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿದೆ ಎಂದು ಶಾಸಕ ಅರಗ ಜ್ಞಾನೇಂದ್ರ ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು, ಸಮರ್ಪಕ ಮಾಹಿತಿ ಒದಗಿಸದ ಕಂದಾಯ ಅಧಿಕಾರಿಗೆ ನೋಟಿಸ್​​ ಜಾರಿಗೊಳಿಸುವಂತೆ ಹಾಗೂ ತಕ್ಷಣ ಸಮರ್ಪಕ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಿದರು.

ಶಾಲೆ ಸಮೀಕ್ಷೆ ಖಾತ್ರಿಪಡಿಸಿ

ತೀರ್ಥಹಳ್ಳಿ ತಾಲೂಕಿನಲ್ಲಿ ಅತಿವೃಷ್ಟಿ ಬಳಿಕ ಶಾಲಾ ಕಟ್ಟಡಗಳ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ಒದಗಿಸುವಂತೆ ಸೂಚನೆ ನೀಡಿದ್ದರೂ ಪರಿಶೀಲನೆ ನಡೆಸಿಲ್ಲ ಎಂದು ಶಾಸಕರು ತಿಳಿಸಿದರು. ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಶಾಸಕ ಹರತಾಳು ಹಾಲಪ್ಪ ಅವರು ಮಾತನಾಡಿ, ಹಲವು ರೈತರ ಗದ್ದೆಗಳಲ್ಲಿ ಮರಳು ಮತ್ತು ಮಣ್ಣು ತುಂಬಿ ಬೆಳೆ ಹಾನಿಯಾಗಿದೆ. ಅದನ್ನು ತೆರವುಗೊಳಿಸಲು ರೈತರಿಗೆ ತಕ್ಷಣ ಕನಿಷ್ಠ 10ಸಾವಿರ ರೂ. ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಭೂಮಿಯಲ್ಲಿ ಕನಿಷ್ಠ 3 ಇಂಚಿನಷ್ಟು ಮರಳು ಮತ್ತು ಮಣ್ಣು ತುಂಬಿದ್ದರೆ ಹೆಕ್ಟೇರ್​​​ಗೆ 12,200 ರೂ. ಹಾಗೂ ಅದಕ್ಕಿಂತ ಹೆಚ್ಚಿನ ಹಾನಿ ಉಂಟಾದರೆ ಹೆಕ್ಟೇರ್​​​ಗೆ 35,500 ರೂ. ಪರಿಹಾರ ನೀಡಲಾಗುವುದು. ಜಿಲ್ಲೆಯಲ್ಲಿ 903 ಹೆ. ಕೃಷಿ ಭೂಮಿಯಲ್ಲಿ 3 ಇಂಚಿನಷ್ಟು ಹೂಳು ತುಂಬಿದ್ದು, ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್ ತಿಳಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೆರೆ ಪೀಡಿತ 4,573 ಮನೆಗಳನ್ನು ಗುರುತಿಸಲಾಗಿದ್ದು, ಪರಿಹಾರ ಕೋರಿ ತಹಶೀಲ್ದಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಕೆಲವು ಮನೆಗಳ ಸಮೀಕ್ಷೆ ಕಾರ್ಯ ನಡೆಸಬೇಕಾಗಿದೆ ಎಂದು ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದರು.

ಶಾಸಕರಾದ ಅಶೋಕ ನಾಯ್ಕ, ರುದ್ರೇಗೌಡ, ಆಯನೂರು ಮಂಜುನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ನೆರೆ ಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಉಂಟಾಗಿರುವ ಹಾನಿಯ ಕುರಿತಾಗಿ ಸಮರ್ಪಕವಾಗಿ ಸಮೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಹೊಸ ಸಭಾಂಗಣದಲ್ಲಿ ಪ್ರವಾಹ ಪರಿಹಾರ ಕ್ರಮಗಳ ಕುರಿತಾಗಿ ಕರೆಯಲಾಗಿದ್ದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ನೆರೆ ಪರಿಹಾರ ಕಾರ್ಯಗಳಿಗಾಗಿ ಪ್ರತಿ ತಹಶೀಲ್ದಾರ್ ಖಾತೆಗೆ ತಲಾ 50ಲಕ್ಷ ರೂ. ಒಂದೆರಡು ದಿನಗಳಲ್ಲಿ ಜಮಾ ಮಾಡಲಾಗುವುದು ಎಂದು ಅವರು ಹೇಳಿದರು.

ಪರಿಹಾರ ಕಾರ್ಯ ತ್ವರಿತಗೊಳಿಸಲು ಸೂಚನೆ: ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಗೀಡಾಗಿರುವ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾಗೂ ಪೂರ್ಣ ಹಾಗೂ ಭಾಗಶಃ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ನೀಡುವ ಕಾರ್ಯವನ್ನು ಇನ್ನಷ್ಟು ತ್ವರಿತಗೊಳಿಸಬೇಕು. ಹಾನಿ ಸಮೀಕ್ಷೆಯನ್ನು ಸರಿಯಾಗಿ ಮಾಡಬೇಕು. ಯಾರಿಗೂ ಅನ್ಯಾಯವಾಗದಂತೆ ಹಾನಿಗೀಡಾದ ಪ್ರತಿಯೊಬ್ಬರಿಗೂ ಸಮರ್ಪಕ ಪರಿಹಾರ ಸಿಗುವಂತೆ ಖಾತ್ರಿಪಡಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.Body:ತೀರ್ಥಹಳ್ಳಿ ತಾಲೂಕಿನಲ್ಲಿ ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಮನೆಗಳ ಮತ್ತು ಕೃಷಿ ಮತ್ತು ತೋಟಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾಗಿ ಸಮೀಕ್ಷೆ ನಡೆಸಲಾಗಿಲ್ಲ. ತೀರ್ಥಹಳ್ಳಿಯಲ್ಲಿ ಕೆಲವು ಮನೆಗಳು ಸಂಪೂರ್ಣ ಕುಸಿದಿದ್ದರೂ ಅದನ್ನು ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿದೆ ಎಂದು ಶಾಸಕ ಅರಗ ಜ್ಞಾನೇಂದ್ರ ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು, ಸಮರ್ಪಕ ಮಾಹಿತಿಯನ್ನು ಒದಗಿಸದ ಕಂದಾಯ ಅಧಿಕಾರಿಗೆ ನೊಟೀಸ್ ಜಾರಿಗೊಳಿಸುವಂತೆ ಹಾಗೂ ತಕ್ಷಣ ಸಮರ್ಪಕ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಿದರು.

ಶಾಲೆ ಸಮೀಕ್ಷೆ ಖಾತ್ರಿಪಡಿಸಿ: ತೀರ್ಥಹಳ್ಳಿ ತಾಲೂಕಿನಲ್ಲಿ ಅತಿವೃಷ್ಟಿ ಬಳಿಕ ಶಾಲಾ ಕಟ್ಟಡಗಳ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ಒದಗಿಸುವಂತೆ ಸೂಚನೆ ನೀಡಿದ್ದರೂ, ಇನ್ನೂ ಪರಿಶೀಲನೆ ನಡೆಸಿಲ್ಲ ಎಂದು ಶಾಸಕರು ತಿಳಿಸಿದರು. ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.Conclusion:ಶಾಸಕ ಹರತಾಳು ಹಾಲಪ್ಪ ಅವರು ಮಾತನಾಡಿ, ಹಲವು ರೈತರ ಗದ್ದೆಗಳಲ್ಲಿ ಮರಳು ಮತ್ತು ಮಣ್ಣು ತುಂಬಿ ಬೆಳೆ ಹಾನಿಯಾಗಿದೆ. ಅದನ್ನು ತೆರವುಗೊಳಿಸಲು ರೈತರಿಗೆ ತಕ್ಷಣ ಕನಿಷ್ಟ 10ಸಾವಿರ ರೂ. ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಭೂಮಿಯಲ್ಲಿ ಕನಿಷ್ಟ 3ಇಂಚಿನಷ್ಟು ಮರಳು ಮತ್ತು ಮಣ್ಣು ತುಂಬಿದ್ದರೆ ಹೆಕ್ಟೇರ್‍ಗೆ 12,200ರೂ. ಹಾಗೂ ಅದಕ್ಕಿಂತ ಹೆಚ್ಚಿನ ಹಾನಿ ಉಂಟಾದರೆ ಹೆಕ್ಟೇರ್‍ಗೆ 35500ರೂ. ಪರಿಹಾರ ನೀಡಲಾಗುವುದು. ಜಿಲ್ಲೆಯಲ್ಲಿ 903ಹೆ. ಕೃಷಿ ಭೂಮಿಯಲ್ಲಿ 3ಇಂಚಿನಷ್ಟು ಹೂಳು ತುಂಬಿದ್ದು, ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್ ತಿಳಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೆರೆಯಿಂದ ಪೀಡಿತವಾದ 4573ಮನೆಗಳನ್ನು ಗುರುತಿಸಲಾಗಿದ್ದು, ಪರಿಹಾರಕ್ಕೆ ಕೋರಿ ತಹಶೀಲ್ದಾರ್ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇನ್ನೂ ಕೆಲವು ಮನೆಗಳ ಸಮೀಕ್ಷೆ ಕಾರ್ಯ ನಡೆಸಬೇಕಾಗಿದೆ ಎಂದು ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದರು.

ಶಾಸಕರಾದ ಅಶೋಕ ನಾಯ್ಕ, ರುದ್ರೇಗೌಡ, ಆಯನೂರು ಮಂಜುನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಮೈಕ್ ಗಾಗಿ ಹುಟುಕಾಟ: ಸಭೆಯಲ್ಲಿ ವೇದಿಕೆ ಮೇಲಿದ್ದ ಡಿಸಿ ಹಾಗೂ ಜನಪ್ರತಿನಿಧಿಗಳು ಮಾಹಿತಿಗಾಗಿ ಅಧಿಕಾರಿಗಳನ್ನು ಪ್ರಶ್ನೆ ಕೇಳಿದಾಗ ಅಧಿಕಾರಿಗಳು ಕುಳಿತ ಚೇರ್ ಮೈಕ್ ನಲ್ಲಿ ಸರಿಯಾಗಿ ಧ್ವನಿ ಕೇಳದೆ ಹೋದಾಗ ಹ್ಯಾಂಡ್ ಮೈಕ್ ನೀಡಿದರು. ಓರ್ವ ಅಧಿಕಾರಿ ಮಾತನಾಡಿದ ನಂತ್ರ ಬೇರೆಯವರಿಗೆ ಮೈಕ್ ನೀಡಲು ಹುಡುಕಾಡಿದಾಗ ಮೈಕ್ ನಾಪತ್ತೆಯಾಗಿತ್ತು. ಹುಡುಕಿದರು ಸಹ ಮೈಕ್ ಸಿಗಲಿಲ್ಲ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.