ETV Bharat / state

ಚೆಕ್‌ ಪೋಸ್ಟ್​ಗಳಲ್ಲಿ ಬಿಗಿ ಭದ್ರತೆ.. ಜಿಲ್ಲಾಧಿಕಾಧಿಕಾರಿ ಕೆ ಬಿ ಶಿವಕುಮಾರ್.. - ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಮಾಸ್ಕ್ ಧರಿಸುವುದನ್ನು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಇತರ ಕಡೆಗಳಲ್ಲಿ ರೂ. 100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

DC. K.  B Shivakumar  Notice
ಜಿಲ್ಲಾಧಿಕಾಧಿಕಾರಿ ಕೆ.ಬಿ.ಶಿವಕುಮಾರ್
author img

By

Published : May 4, 2020, 7:21 PM IST

ಶಿವಮೊಗ್ಗ : ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆ ಚೆಕ್‍ಪೋಸ್ಟ್ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಮಾಸ್ಕ್ ಧರಿಸುವುದನ್ನು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿಲಾಗಿದ್ದು, ಅದನ್ನ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಉಲ್ಲಂಘನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಇತರ ಕಡೆಗಳಲ್ಲಿ ರೂ. 100 ದಂಡ ವಿಧಿಸಲಾಗುವುದು. ಸಾಮಾಜಿಕ ಅಂತರ ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ನಡುವೆ ಕನಿಷ್ಟ 1ಮೀಟರ್ ಅಂತರ ಪಾಲಿಸಬೇಕು. ಈ ಕುರಿತು ವ್ಯಾಪಕವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಸಾಮಾಜಿಕ ಅಂತರ ಪಾಲಿಸಲು ಕ್ರಮಕೈಗೊಳ್ಳದಿರುವ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ತಾಲೂಕು ಮಟ್ಟದಲ್ಲಿ ಉಸಿರಾಟದ ತೊಂದರೆ ಮತ್ತಿತರ ರೋಗ ಲಕ್ಷಣಗಳಿರುವ ರೋಗಿಗಳನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ. ಚಿಕಿತ್ಸೆ ವಿವರಗಳನ್ನು ನೀಡದ ಕ್ಲಿನಿಕ್‍ಗಳ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೆಸರಿನಲ್ಲಿ ಪ್ರಕರಣ ದಾಖಲು ಮಾಡಬೇಕು. ತಹಶೀಲ್ದಾರ್ ಕಡ್ಡಾಯವಾಗಿ ಎಲ್ಲಾ ಕ್ಲಿನಿಕ್‍ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು.

ಲೋಪ ಸಂಭವಿಸಿದರೆ ಸಂಬಂಧಪಟ್ಟ ತಹಶೀಲ್ದಾರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಆಹಾರ ಪದಾರ್ಥಗಳನ್ನು ಬೀದಿ ಬದಿ ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಕೈಗಾರಿಕಾ ಸಂಸ್ಥೆಗಳಿಗೆ 2 ದಿನಗಳಿಗೊಮ್ಮೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಈ ಕುರಿತು ಸರ್ಕಾರ ಬಿಡುಗಡೆಗೊಳಿಸಿರುವ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದಿಯೇ ಎಂಬ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.