ETV Bharat / state

ಇ-ಸಂಜೀವಿನಿ ಆ್ಯಪ್ ಮೂಲಕ ಆನ್‍ಲೈನ್ ಆರೋಗ್ಯ ಸೇವೆ ಬಳಸಿಕೊಳ್ಳಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ - ಇ-ಸಂಜೀವಿನಿ ಆ್ಯಪ್ ಮೂಲಕ ಆನ್‍ಲೈನ್ ಆರೋಗ್ಯ ಸೇವೆ

ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲು ಸಾಧ್ಯವಾಗದಿರುವ ಸಾರ್ವಜನಿಕರು ಇ-ಸಂಜೀವಿನಿ ಆ್ಯಪ್ ಮೂಲಕ ಆನ್‍ಲೈನ್‍ನಲ್ಲಿಯೇ ತಜ್ಞ ವೈದ್ಯರಿಂದ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

dc
dc
author img

By

Published : Sep 9, 2020, 5:55 PM IST

ಶಿವಮೊಗ್ಗ: ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ಹೋಗಲು ತೊಂದರೆ ಅನುಭವಿಸುವವರು ಇ-ಸಂಜೀವಿನಿ ಆ್ಯಪ್ ಮೂಲಕ ಆನ್‍ಲೈನ್‍ನಲ್ಲಿಯೇ ತಜ್ಞ ವೈದ್ಯರಿಂದ ಆರೋಗ್ಯ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಮೊಬೈಲ್ ಪ್ಲೇ ಸ್ಟೋರ್​ನಿಂದ ಇ-ಸಂಜೀವಿನಿ ಒಪಿಡಿ ಆ್ಯಪ್ ಡೌನ್‍ಲೋಡ್ ಮಾಡುವ ಮೂಲಕ ಅಥವಾ ಗೂಗಲ್‍ನಲ್ಲಿ ಇ-ಸಂಜೀವಿನಿ ಒಪಿಡಿ ಎಂದು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ವೆಬ್ ವಿಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಆರೋಗ್ಯ ಸಮಸ್ಯೆ ಕುರಿತು ವಿವರಿಸಿದರೆ, ಅವರು ಆರೋಗ್ಯ ಸಮಸ್ಯೆಗೆ ತಕ್ಕಂತೆ ಚಿಕಿತ್ಸೆ ಸೂಚಿಸುವ ವ್ಯವಸ್ಥೆ ಇದಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲು ಸಾಧ್ಯವಾಗದಿರುವ ಸಾರ್ವಜನಿಕರು ಇದರ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಬಳಕೆ ಹೇಗೆ?

ಟೆಲಿ ಸಮಾಲೋಚನಾ ಸೇವೆಗಾಗಿ ಆ್ಯಪ್ ತೆರೆದರೆ, ಕೇಂದ್ರ ಆರೋಗ್ಯ ಸಚಿವಾಲಯದ ಮುಖಪುಟ ತೆರೆದುಕೊಳ್ಳುತ್ತದೆ. ಇದರಲ್ಲಿ ರೋಗಿಯ ರಿಜಿಸ್ಟ್ರೇಷನ್‍ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿದರೆ ಒಟಿಪಿ ಸಂಖ್ಯೆ ಬರಲಿದೆ. ಈ ಒಟಿಪಿ ನಮೂದಿಸಿದರೆ ರಿಜಿಸ್ಟ್ರೇಷನ್ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ. ಅದರಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ಸಂಖ್ಯೆ ಹಾಗೂ ವಿಳಾಸ ನಮೂದಿಸಿ ಲಾಗಿನ್ ಆಗಬೇಕು. ಈ ವೇಳೆ ಟೋಕನ್ ನಂಬರ್ ದೊರೆಯುವುದು. ಬಳಿಕ ಟೋಕನ್ ನಂಬರ್ ನೀಡಿ ವೈದ್ಯರನ್ನು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಬಹುದು. ಈ ಸೇವೆ ನಿತ್ಯ ಬೆಳಿಗ್ಗೆ 10ರಿಂದ ಸಂಜೆ 4ಗಂಟೆವರೆಗೆ ಲಭ್ಯವಿರಲಿದೆ.

ಒಮ್ಮೆ ನೋಂದಣಿ ಆದವರು ಇನ್ನೊಮ್ಮೆ ನೋಂದಣಿ ಆಗುವ ಅಗತ್ಯವಿರುವುದಿಲ್ಲ. ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ತಜ್ಞ ವೈದ್ಯರನ್ನು ಹಾಗೂ ವೈದ್ಯಾಧಿಕಾರಿಗಳನ್ನು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಇ-ಸಂಜೀವಿನಿ ಬಳಕೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಸಣ್ಣಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ತೆರಳುವ ಬದಲು, ಆ್ಯಪ್ ಮೂಲಕ ವೈದ್ಯರನ್ನು ಸಂಪರ್ಕಿಸುವುದು ಇದರಿಂದ ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.