ಶಿವಮೊಗ್ಗ : ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜೂನ್-18ರಂದು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪರೀಕ್ಷಾ ಪೂರ್ವ ಸಿದ್ಧತೆಯ ಸಭೆ ನಡೆಯಿತು. ಜಿಲ್ಲಾ ಪದವಿ ಪೂರ್ವ ನಿರ್ದೇಶಕ ನಾಗರಾಜ್ರವರು ಮೊದಲು ತಮ್ಮ ಇಲಾಖೆಯ ತಯಾರಿಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಕೊರೊನಾ ಹಿನ್ನೆಲೆ ಪರೀಕ್ಷೆಯನ್ನು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಡೆಸಬೇಕಾಗಿದೆ. ಇದರಿಂದ ಪರೀಕ್ಷಾ ಕೇಂದ್ರಕ್ಕೆ ಮಕ್ಕಳು ಮಾಸ್ಕ್ ಧರಿಸಿ ಬರುವಂತೆ ಸೂಚಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು. ಜಿಲ್ಲೆಯಲ್ಲಿ ಸುಮಾರು 18 ಸಾವಿರ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳನ್ನು ಕರೆತರಲು ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಪ್ರದೇಶಗಳಿಂದ ಮಕ್ಕಳು ಆಗಮಿಸುವುದರಿಂದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಬರಲು ಸಾಧ್ಯವಾಗದ ಕಾರಣ ಪರೀಕ್ಷಾ ಕೇಂದ್ರದ ಹತ್ತಿರದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳನ್ನು ಇಡಲು ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.
ಪರೀಕ್ಷಾ ಕೇಂದ್ರಕ್ಕೆ ಸ್ಯಾನಿಟೈಸ್ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಜೂನ್ 15ರಿಂದ 16ರಂದು ಎರಡು ದಿನ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಮಾಡಲು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರಕ್ಕೆ ಮನೆಯಲ್ಲಿ ಕಾದು ಆರಿಸಿದ ನೀರನ್ನು ತರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಬಿಸ್ಕೆಟ್ ವಿತರಣೆ ಮಾಡಲು ಸೂಚನೆ ನೀಡಲಾಗಿದೆ ಎಂದರು.