ETV Bharat / state

ಶಿವಮೊಗ್ಗ: ಕೋವಿಡ್ ಕೇರ್ ಸೆಂಟರ್​ಗೆ ಜಿಲ್ಲಾಧಿಕಾರಿ ಭೇಟಿ

ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Shivamogga
ಕೋವಿಡ್ ಕೇರ್ ಸೆಂಟರ್​ಗೆ ಜಿಲ್ಲಾಧಿಕಾರಿ ಭೇಟಿ
author img

By

Published : Aug 16, 2020, 4:42 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹಾಗೂ ಜಿಲ್ಲಾ ಪಂಚಾಯತ ಸಿಇಓ ವೈಶಾಲಿ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಅಂಬರಗೊಪ್ಪ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಸಮಸ್ಯೆ ಆಲಿಸಿದರು.

ಶಿವಮೊಗ್ಗ: ಕೋವಿಡ್ ಕೇರ್ ಸೆಂಟರ್​ಗೆ ಜಿಲ್ಲಾಧಿಕಾರಿ ಭೇಟಿ

ಕೆಲವರು ಜಿಲ್ಲಾಧಿಕಾರಿಗಳಿಗೆ ಸ್ಯಾನಿಟೈಜರ್ ಸೇರಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡರು ಅದಕ್ಕೆ ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.ಆದರೆ ಸೋಂಕಿತನೊಬ್ಬ ಇಂದೇ ಮನೆಗೆ ಕಳುಹಿಸಿ, ನಾಳೆ ಹೆಂಡತಿ ಮನೆಗೆ ಸೇರಿಸೊಲ್ಲಾ ಎಂದು ಹೇಳಿದ್ದಾಳೆ ಎಂದು ವಿಚಿತ್ರ ಬೇಡಿಕೆಯನ್ನು ಇಟ್ಟಿದ್ದಾನೆ.

ಈ ಸಂದರ್ಭದಲ್ಲಿ ಶಿಕಾರಿಪುರ ತಹಶಿಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಪೊಲೀಸ್ ವರಿಷ್ಠಾಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.