ETV Bharat / state

ಕುಲಪತಿಗಳ ನೇಮಕಾತಿಗೆ ತಜ್ಞರ ಸಮಿತಿ ರಚನೆ: ಡಿಸಿಎಂ ಡಾ.ಅಶ್ವಥ್ ನಾರಾಯಣ್

ವಿಶ್ವವಿದ್ಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ ಹೊಸದಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯನ್ನು ಮಂಡಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್ ನಾರಾಯಣ್ ತಿಳಿಸಿದರು.

Shivamogga
ಡಿಸಿಎಂ ಡಾ.ಅಶ್ವಥ್ ನಾರಾಯಣ
author img

By

Published : Feb 13, 2020, 5:41 PM IST

ಶಿವಮೊಗ್ಗ: ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕಾತಿಯನ್ನು ಗೌರವಯುತವಾಗಿ ಮಾಡಲು ಪ್ರಸ್ತುತ ಇರುವ ನೇಮಕಾತಿ ಪ್ರಕ್ರಿಯೆಯನ್ನು ಬದಲಾಯಿಸಿ ತಜ್ಞರ ನೇಮಕಾತಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್ ನಾರಾಯಣ್ ತಿಳಿಸಿದರು.

ಡಿಸಿಎಂ ಡಾ.ಅಶ್ವಥ್ ನಾರಾಯಣ

ಕುವೆಂಪು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ, ಕಳೆದ ಸರ್ಕಾರ ವಿಧಾನ ಮಂಡಲದಲ್ಲಿ ಮಂಡಿಸಿದ್ದ ಕಾಯ್ದೆಯನ್ನು ಹಿಂದಕ್ಕೆ ಪಡೆದುಕೊಂಡು, ಹೊಸದಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯನ್ನು ಮಂಡಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಕುಲಪತಿಗಳ ನೇಮಕಾತಿಗೆ ಪ್ರತಿ ವಿಶ್ವವಿದ್ಯಾಲಯಗಳಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸುವ ವ್ಯವಸ್ಥೆಯಿದೆ. ನೇಮಕಾತಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವ ಉದ್ದೇಶದಿಂದ ಇನ್ನು ಮುಂದೆ ನೇಮಕಾತಿಗೆ ಸಮಿತಿಯನ್ನು ರಚಿಸಲಾಗುವುದು. ಜೇಷ್ಠತೆಯ ಆಧಾರದಲ್ಲಿ ಕುಲಪತಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಎಲ್ಲಾ ವಿಶ್ವವಿದ್ಯಾಲಯಗಳ ಆಡಳಿತ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿ, ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ, ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಯಡಿ ತರಲು ಇ-ಗವರ್ನೆನ್ಸ್ ಪ್ಲಾಟ್‍ಫಾರ್ಮ್ ಸಿದ್ಧಪಡಿಸಲಾಗುವುದು. ಇದರಿಂದ ಎಲ್ಲಾ ವಿಶ್ವವಿದ್ಯಾಲಯಗಳ ಆಡಳಿತ ಪ್ರಕ್ರಿಯೆ ಸುಲಲಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಕುಲಪತಿಗಳೊಂದಿಗೆ ಹಲವು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ ಎಂದರು.

ವಿದ್ಯಾರ್ಥಿಗಳ ಅಹವಾಲುಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಲು ಸಾಧ್ಯವಾಗುವಂತೆ ಡ್ಯಾಶ್‍ಬೋರ್ಡ್ ಸೌಲಭ್ಯ ಕಲ್ಪಿಸಲಾಗುವುದು. ವಾಟ್ಸಾಪ್ ಸೇರಿದಂತೆ ಇನ್ನಾವುದೇ ಮಾಧ್ಯಮದ ಮೂಲಕ ವಿದ್ಯಾರ್ಥಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿ ನ್ಯಾಯ ಪಡೆಯಲು ಇದರಿಂದ ಸಾಧ್ಯವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ನಿಯಂತ್ರಿಸಿದರೆ ಮಾತ್ರ ಇತರ ಕ್ಷೇತ್ರಗಳನ್ನು ಸರಿಪಡಿಸಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರಿಸರ್ಚ್ ಫೌಂಡೇಶನ್ ಸ್ಥಾಪನೆ:

ಸಂಶೋಧನಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ರಿಸರ್ಚ್ ಫೌಂಡೇಶನ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಸಂಶೋಧನೆಗೆ ಹೆಚ್ಚಿನ ಆರ್ಥಿಕ ಸಂಪನ್ಮೂಲ ಒದಗಿಸುವುದು ಇದರ ಉದ್ದೇಶವಾಗಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿ ಜ್ಞಾನ ನಗರಿಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.