ETV Bharat / state

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಭೂಮಿ ಡಿ ನೋಟಿಫೈ: ಸಂಸತ್​ನಲ್ಲಿ ಸಂಸದ ರಾಘವೇಂದ್ರ ಒತ್ತಾಯ - MP Raghavendra urges in Parliament

ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯ್ದೆ 1980 ಕ್ಕಿಂತ ಮೊದಲು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷ್ಯ ದಿಂದ ಅದು ಆಗಲಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ದೂರಿದ್ದಾರೆ.

MP B Y Raghavendra
ಸಂಸದ ಬಿ ವೈ ರಾಘವೇಂದ್ರ
author img

By

Published : Dec 22, 2022, 9:57 AM IST

Updated : Dec 22, 2022, 10:38 AM IST

ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ: ಮಲೆನಾಡಿನ ವಾಣಿಜ್ಯ ಬೆಳೆ ಅಡಕೆ ದರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದ ಸಂಸದ ಬಿ ವೈ ರಾಘವೇಂದ್ರ, ನಿನ್ನೆ ಶರಾವತಿ ಸಂತ್ರಸ್ತರ ಪರವಾಗಿ ಅರಣ್ಯ ಭೂಮಿ ಡಿ ನೋಟಿಫೈ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರ ಗಮನ ಸೆಳೆದರು.

ಮೊದಲಿಗೆ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಸಭಾಧ್ಯಕ್ಷರಿಗೆ ಧನ್ಯವಾದ ಸಲ್ಲಿಸಿದರು.

ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಶಿವಮೊಗ್ಗ ಜಿಲ್ಲೆಯ ಪ್ರಮುಖ ರೈತರು ಈಡಿಗ, ಇತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯ್ದೆ 1980 ಕ್ಕಿಂತ ಮೊದಲು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ, ಆಗಿನ ಸರ್ಕಾರದ ನಿರ್ಲಕ್ಷ್ಯದಿಂದ ಅದು ಆಗಲಿಲ್ಲ. ಇದರಿಂದಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಈ ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕು ಎಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ ಎಂದರು.

ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ.

ದೇಶದ 139 ಕೋಟಿ ಜನರಿಗೆ ಸಂತೋಷ ಮತ್ತು ಸುರಕ್ಷಿತ ಜೀವನ ಸಾಗಿಸುವಂತಾಗಲು ಪ್ರತಿ ಹೆಜ್ಜೆ ಇಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಪರಿಸರ ಮತ್ತು ಅರಣ್ಯ ಖಾತೆ ಸಚಿವರು ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿಯನ್ನು ಮಂಜೂರು ಮಾಡಲು, ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ಮೂಲಕ ವಿಳಂಬ ಮಾಡದೆ ತಕ್ಷಣವೇ ಡಿ ನೋಟಿಫಿಕೇಶನ್ ಹೊರಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆಮದು ಅಡಿಕೆಗೆ ಹೆಚ್ಚು ಸುಂಕ ವಿಧಿಸಿ, ಎಲೆಚುಕ್ಕೆ ರೋಗಕ್ಕೆ ಔಷಧಿ ಪರಿಚಯಿಸಿ: ಬಿ ವೈ ರಾಘವೇಂದ್ರ

Last Updated : Dec 22, 2022, 10:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.