ETV Bharat / state

ಪ್ರೇಯಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್​ ಪ್ರೇಮಿ ಸಾವು - shivamogga lover death news

ಕಳೆದ 7 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್​ ಪ್ರೇಮಿಯೋರ್ವ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Pagal lover
ಪಾಗಲ್​ ಪ್ರೇಮಿ ಸಾವು
author img

By

Published : Aug 27, 2021, 12:56 PM IST

ಶಿವಮೊಗ್ಗ: ಬೇರೆಯವನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾನೆ.

ಹೊಸನಗರ ತಾಲೂಕಿನ ಬೆಳ್ಳೂರಿನ ನಿವಾಸಿಯಾದ ಶಿವುಮೂರ್ತಿ ಸಾವನ್ನಪ್ಪಿದ ಯುವಕ. ಈತ ರಿಪ್ಪನಪೇಟೆಯ ಸರ್ಕಾರಿ ಕಾಲೇಜಿನಲ್ಲಿ ಪದವಿ ತರಗತಿ ಓದುತ್ತಿದ್ದ. ಶಿವುಮೂರ್ತಿ ಕಳೆದ 7 ವರ್ಷಗಳಿಂದ ಭಟ್ಕಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದರೆ ಅವಳು ಬೇರೆಯವರನ್ನು ಪ್ರೀತಿಸುತ್ತಿದ್ದಾಳೆ ಎಂದು ತಿಳಿದು ಮೊನ್ನೆ ಆಕೆಯನ್ನು ನಂಜಪ್ಪ ನರ್ಸಿಂಗ್ ಕಾಲೇಜಿನಿಂದ ತನ್ನೂರಿಗೆ ಕರೆದು‌ಕೊಂಡು ಹೋಗಿದ್ದಾನೆ. ಅಲ್ಲಿ ಡೆತ್​ನೋಟ್ ಬರೆದಿಟ್ಟು, ಕುತ್ತಿಗೆಯನ್ನು ವೇಲ್ ನಿಂದ ಬಿಗಿದು ಕೊಲೆ ಮಾಡಿ, ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ನೋಡಿ: ಶಿವಮೊಗ್ಗದಲ್ಲಿ ವಿದ್ಯಾರ್ಥಿನಿ ಶವ ಪತ್ತೆ.. ಪ್ರೀತಿಸಿದವನಿಂದಲೇ ಕೊಲೆ ನಡೆದಿರುವ ಶಂಕೆ..!

ನಂತರ ಮನೆಗೆ ತೆರಳಿದ ಶಿವುಮೂರ್ತಿ, ವಿಷ ಸೇವಿಸಿರುವುದಾಗಿ ತಿಳಿಸಿದ್ದಾನೆ. ಕೂಡಲೇ ಈತನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದು, ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮೊನ್ನೆ ನರ್ಸಿಂಗ್ ಕಾಲೇಜಿನಿಂದ ಕಾಣೆಯಾಗಿದ್ದಾಳೆ ಎಂದು ಕೊಲೆಯಾದ ಯುವತಿಯ ತಂದೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.