ETV Bharat / state

ಶಿವಮೊಗ್ಗದ ಸೋಗಾನೆ ಗ್ರಾಮದ ಸಂತ್ರಸ್ತರಿಗೆ ನಿವೇಶನ ನೀಡಲು ನಿರ್ಧಾರ - Sogane village victims

ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮಲೆನಾಡಿಗರ ಬಹು ದಿನದ ಬೇಡಿಕೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2007ರಲ್ಲಿಯೇ ಚಾಲನೆ ನೀಡಲಾಗಿತ್ತು. ಇದಕ್ಕಾಗಿ ಶಿವಮೊಗ್ಗ ತಾಲೂಕಿನ ಸೋಗಾನೆ ಬಳಿ ರೈತರ ಪ್ರತಿರೋಧದ ನಡುವೆಯೂ ರಾಜ್ಯ ಸರ್ಕಾರ ಸುಮಾರು 900 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು.

Decision to provide site
ಶಿವಮೊಗ್ಗದ ಸೋಗಾನೆ ಗ್ರಾಮದ ಸಂತ್ರಸ್ತರಿಗೆ ನಿವೇಶನ ನೀಡಲು ನಿರ್ಧಾರ
author img

By

Published : Aug 29, 2020, 9:24 AM IST

ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣಕ್ಕಾಗಿ ಸಂತ್ರಸ್ತರಾದ ರೈತರಿಗೆ ಸೂಕ್ತ ಪರಿಹಾರ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಶಿವಮೊಗ್ಗದ ಸೋಗಾನೆ ಗ್ರಾಮದ ಸಂತ್ರಸ್ತರಿಗೆ ನಿವೇಶನ ನೀಡಲು ನಿರ್ಧಾರ

ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮಲೆನಾಡಿಗರ ಬಹುದಿನದ ಬೇಡಿಕೆಯಾಗಿದ್ದ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2007ರಲ್ಲಿಯೇ ಚಾಲನೆ ನೀಡಲಾಗಿತ್ತು. ಇದಕ್ಕಾಗಿ ಶಿವಮೊಗ್ಗ ತಾಲೂಕಿನ ಸೋಗಾನೆ ಬಳಿ ರೈತರ ಪ್ರತಿರೋಧದ ನಡುವೆಯೂ ರಾಜ್ಯ ಸರ್ಕಾರ ಸುಮಾರು 900 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಜೊತೆಗೆ ವಿಮಾನ ನಿಲ್ದಾಣಕ್ಕಾಗಿ ಭೂಮಿ-ಆಸ್ತಿ ಕಳೆದು ಕೊಂಡ ಸಂತ್ರಸ್ತರಿಗೆ ಸಿಎಂ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪರಿಹಾರ ಒದಗಿಸಲು ನಿರ್ಧಾರ ಮಾಡಲಾಗಿತ್ತು. ಅದರಂತೆ ಇದೀಗ ಸೋಗಾನೆಯ ಸಂತ್ರಸ್ತ ರೈತರಿಗೆ ಜಿಲ್ಲಾಡಳಿತ ಪರಿಹಾರ ನೀಡಲು ಮುಂದಾಗಿದೆ.

ಹೌದು, 2008ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಏರ್​​ಪೋರ್ಟ್ ಮಂಜೂರು ಮಾಡಿದ್ದರು. ಆದರೆ, ಆರಂಭದಲ್ಲಿ ಏರ್​​ಪೋರ್ಟ್ ನಿರ್ಮಾಣದ ಟೆಂಡರ್ ಪಡೆದ ಸಂಸ್ಥೆ ಸರಿಯಾಗಿ ಕೆಲಸ ಮಾಡದ ಹಿನ್ನೆಲೆ ಕಾಮಗಾರಿ ಟೇಕ್ ಆಫ್ ಆಗಿರಲಿಲ್ಲ. ಇದೀಗ ಮತ್ತೊಂದು ಅವಧಿಗೆ ಬಿ.ಎಸ್.ಯಡಿಯೂರಪ್ಪ ಸಿಎಂ ಆದ ಬಳಿಕ ಏರ್​ಪೋರ್ಟ್​ ನಿರ್ಮಾಣಕ್ಕೆ ಸುಮಾರು 200 ಕೋಟಿ ಹಣ ಬಿಡುಗಡೆ ಮಾಡಿ, ಕಳೆದ ಜೂನ್​ನಲ್ಲಿ ಶಂಕುಸ್ಥಾಪನೆ ಮಾಡುವ ಮೂಲಕ ಮರು ಚಾಲನೆ ನೀಡಿದ್ದರು.

ಈ ವೇಳೆ ಸೋಗಾನೆ ವಿಮಾನ ನಿಲ್ದಾಣಕ್ಕಾಗಿ ಸಂತ್ರಸ್ತರಾದ ರೈತರು ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಅದರ ಪರಿಣಾಮವಾಗಿ ಶಿವಮೊಗ್ಗ ಜಿಲ್ಲಾಡಳಿತ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಇನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಸೋಗಾನೆ ಬಳಿ ಸುಮಾರು 900 ಎಕರೆ ಜಾಗ ವಶಪಡಿಸಿಕೊಳ್ಳುವ ವೇಳೆ ಸರ್ಕಾರ ಪರಿಹಾರದ ಜೊತೆಗೆ ಪ್ರತೀ ಕುಟುಂಬಕ್ಕೆ ನಿವೇಶನ ಹಾಗೂ ಉದ್ಯೋಗದ ಭರವಸೆ ಸಹ ನೀಡಿತ್ತು. ಆದರಂತೆ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಆಶೋಕ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ನಡೆಸಿ, ಇದೀಗ ನಿವೇಶನ ವಿತರಿಸಲು ನಿರ್ಧರಿಸಲಾಗಿದೆ.

ಸಂತ್ರಸ್ತ ಪ್ರತೀ ಕುಟುಂಬಕ್ಕೆ ಒಂದು ನಿವೇಶನ ನೀಡಲು ಸೂಕ್ತ ಸ್ಥಳಾವಕಾಶವನ್ನು ಶೋಧಿಸಲಾಗುತ್ತಿದೆ. ಪ್ರತೀ ಕುಟುಂಬಕ್ಕೆ 30X40 ಅಳತೆಯ ನಿವೇಶನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಕರ್ನಾಟಕ ಗೃಹ ಮಂಡಳಿಯ ಕಾರ್ಯದರ್ಶಿಗಳು ಸಹ ನಿವೇಶನ ಹಂಚಿಕೆಗೆ ಸಮ್ಮತಿ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.