ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಮಧುಬಂಗಾರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿರುವ ಬೃಹತ್ ಪಾದಯಾತ್ರೆಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಆಯನೂರಿನಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹಾಗೂ ಕಾಗೋಡು ತಿಮ್ಮಪ್ಪ ಚಾಲನೆ ನೀಡಿದರು.
ಆಯನೂರಿನಿಂದ ಪಾದಯಾತ್ರೆ ಆರಂಭಗೊಂಡಿದ್ದು, ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ. ಸಂಜೆ ನಾಲ್ಕು ಗಂಟೆಗೆ ನಗರದ ಎನ್ಇಎಸ್ ಮೈದಾನದಲ್ಲಿ ಜನಾಕ್ರೋಶ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಶರಾವತಿ ಸಂತ್ರಸ್ತರು ಭಾಗಿಯಾಗಲಿದ್ದಾರೆ.
ಪಾದಯಾತ್ರೆಯಲ್ಲಿ ಕಿಮ್ಮನ್ನೆ ರತ್ನಾಕರ್, ಬೇಳೂರು ಗೋಪಾಲಕೃಷ್ಣ, ಶರಾವತಿ ಸಂತ್ರಸ್ತ ಕುಟುಂಬದ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: ನಾಡಿದ್ದು ಶರಾವತಿ ಸಂತ್ರಸ್ತರ ಪರವಾಗಿ ಮಲೆನಾಡು ಜನಾಕ್ರೋಶ ಪಾದಯಾತ್ರೆ: ಮಧು ಬಂಗಾರಪ್ಪ