ETV Bharat / state

Jobs in Shimoga: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನೇಮಕಾತಿ; ಡೇಟಾ ಎಂಟ್ರಿ ಆಪರೇಟರ್​ ಸೇರಿದಂತೆ ಹಲವು ಹುದ್ದೆ

ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುವುದು

author img

By ETV Bharat Karnataka Team

Published : Oct 21, 2023, 12:39 PM IST

DEO and Technical Assistant Recruitment in Shimoga Zilla panchayat

ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಡಿಇಒ ಸೇರಿದಂತೆ ವಿವಿಧ ತಾಂತ್ರಿಕ ಸಹಾಯಕರ ಹುದ್ದೆಗೆ ನೇಮಕಾತಿ ಹೊರಡಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ 16 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳು ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕುಗಳಲ್ಲಿ ಖಾಲಿ ಇದೆ.

  • ಡೇಟಾ ಎಂಟ್ರಿ ಆಪರೇಟರ್​ 3
  • ತಾಂತ್ರಿಕ ಸಹಾಯಕರು (ಅರಣ್ಯ) 4
  • ತಾಂತ್ರಿಕ ಸಹಾಯಕರು (ಕೃಷಿ) 3
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) 4
  • ತಾಂತ್ರಿಕ ಸಹಾಯಕರು (ಸಿವಿಲ್​) 2

ವಿದ್ಯಾರ್ಹತೆ: ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಪಿಯುಸಿ ಜೊತೆಗೆ ಕಂಪ್ಯೂಟರ್​ ಮತ್ತು ಟೈಪಿಂಗ್​ ಜ್ಞಾನವನ್ನು ಹೊಂದಿರಬೇಕು. ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗೆ ಅರಣ್ಯಶಾಸ್ತ್ರದಲ್ಲಿ ಪದವಿ, ತಾಂತ್ರಿಕ ಸಹಾಯಕರು (ಕೃಷಿ) ಕೃಷಿ ವಿಜ್ಞಾನದಲ್ಲಿ ಪದವಿ, ತಾಂತ್ರಿಕ ಸಹಾಯಕರು (ತೋಟಗಾರಿಕೆ) ತೋಟಗಾರಿಕೆ ಪದವಿ ಮತ್ತು ಸಿವಿಲ್​ ತಾಂತ್ರಿಕ ಹುದ್ದೆಗೆ ಸಿವಿಲ್​ನಲ್ಲಿ ಇಂಜಿನಿಯರಿಂಗ್​ ಪದವಿ ಜೊತೆಗೆ ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.

ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷ ಕಾರ್ಯ ನಿರ್ವಹಣೆ ಅನುಭವ ಹೊಂದಿರಬೇಕು.

ವಯೋಮಿತಿ: ತಾಂತ್ರಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 40 ವರ್ಷದ ವಯೋಮಿತಿ ಹೊಂದಿರಬೇಕು. ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಗರಿಷ್ಠ 35 ವರ್ಷದ ಹುದ್ದೆ ಅನುಭವವನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಶಿವಮೊಗ್ಗ ಜಿಲ್ಲಾ ಪಂಚಾಯತ್​ನ ಅಧಿಕೃತ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅಕ್ಟೋಬರ್​ 23 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನ ನವೆಂಬರ್​ 3 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ shimoga.nic.in ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ರಾಯಚೂರು ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗಾವಕಾಶ: ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.