ETV Bharat / state

ಅನುದಾನ ಬಿಡುಗಡೆಯಾಗಿದೆ, ಶೀಘ್ರವೇ ಅಭಿವೃದ್ಧಿ ಕಾಮಗಾರಿ ಆರಂಭ: ಬಿ.ವೈ ರಾಘವೇಂದ್ರ

ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಜಿಲ್ಲೆಗೆ ನೀಡಿದ್ದರು. ಅವುಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

b-y-ragavendra
ಸಂಸದ ಬಿ.ವೈ.ರಾಘವೇಂದ್ರ
author img

By

Published : Jul 18, 2021, 3:56 PM IST

ಶಿವಮೊಗ್ಗ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೇಕಾಗಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ. ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ

ಸೋಗಾನೆಯಲ್ಲಿ ಆಯುರ್ವೇದ ವೈದ್ಯಕೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಘೋಷಣೆ ಮಾಡಲಾಗಿತ್ತು. ಇದಕ್ಕೆ ಬೇಕಾದ 70 ಎಕರೆ ಭೂಮಿಯನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ. ಅನುದಾನ ಬಿಡುಗಡೆಗೂ ಒಪ್ಪಿಗೆ ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಗೆ ವಿವಿ ಕ್ಯಾಂಪಸ್ ಇರುವಕ್ಕಿಯಲ್ಲಿ ಸಿದ್ಧವಾಗಿದೆ. ಇದರ 2ನೇ ಹಂತದ ಅಭಿವೃದ್ದಿಗೆ 100 ಕೋಟಿ ರೂ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ನಬಾರ್ಡ್ 45 ಕೋಟಿ ರೂ.ಗಳನ್ನು ನೀಡಲಿದೆ. ರಾಜ್ಯ ಸರ್ಕಾರ 55 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಘೋಷಿಸಿದ್ದಾರೆ. 60 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಅನುಮತಿಯನ್ನು ಹಣಕಾಸು ಇಲಾಖೆ ನೀಡಿದೆ ಎಂದು ತಿಳಿಸಿದರು.

ನೂತನ ಕ್ಯಾನ್ಸರ್ ಆಸ್ಪತ್ರೆ: ಮೆಗ್ಗಾನ್ ಆಸ್ಪತ್ರೆ ಆವರಣದ 5 ಎಕರೆ ಜಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಅಡಿಯಲ್ಲಿ ನೂತನ ಕ್ಯಾನ್ಸರ್ ಆಸ್ಪತ್ರೆ ಆರಂಭಿಸಲಾಗುತ್ತಿದೆ. ಇದಕ್ಕಿಂತ ಉತ್ತಮ ಜಾಗ ಬೇರೆ ಕಡೆ ಸಿಕ್ಕಿದರೆ ಅದನ್ನು ಪರಿಶೀಲಿಸಲಾಗುತ್ತದೆ ಎಂದರು.

ಹೃದ್ರೋಗ ವಿಭಾಗ ಆರಂಭಕ್ಕೆ ಸೂಚನೆ: ಸಿಮ್ಸ್‌ನ 100 ಪ್ಯಾರಾ ಮೆಡಿಕಲ್ ಸಿಬ್ಬಂದಿ ಹಾಗೂ 25 ಪ್ರಯೋಗಶಾಲಾ ತಂತ್ರಜ್ಞರನ್ನು ಖಾಯಂ ಮಾಡಲು ವಿಶೇಷ ನೇಮಕಾತಿ ನಿಯಮ ರೂಪಿಸಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಹೃದ್ರೋಗ ವಿಭಾಗ ಆರಂಭಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಪಘಾತರಹಿತ ಮಾರ್ಗ: ಮಹಿಳಾ ಪಾಲಿಟೆಕ್ನಿಕ್ ಅಭಿವೃದ್ಧಿಗೆ 12 ಕೋಟಿ, ಸಹ್ಯಾದ್ರಿ ಕಾಲೇಜು ಅಭಿವೃದ್ಧಿಗೆ 14.21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ-ಸವಳಂಗ- ಶಿಕಾರಿಪುರ -ಆನವಟ್ಟಿ ರಸ್ತೆ ಅಭಿವೃದ್ಧಿಗೆ ಇಂಟಲಿಜೆನ್ಸ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ಅಭಿವೃದ್ಧಿ ಗೊಳಿಸಲಾಗುವುದು. ಇದಕ್ಕೆ 10 ಕೋಟಿ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಪಘಾತ ರಹಿತ ಮಾರ್ಗವಾಗಲಿದೆ ಎಂದು ತಿಳಿಸಿದರು.

ಟೂರಿಸಂ ಹಬ್: ಶಿವಮೊಗ್ಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಜೋಗ ಜಲಪಾತ ಅಭಿವೃದ್ಧಿ, ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯನ್ನು ಸಮಗ್ರ ಅಭಿವೃದ್ಧಿ ಪಡಿಸಲಾಗುತ್ತಿದೆ. ಜೊತೆಗೆ ಕೊಡಚಾದ್ರಿ ಅಭಿವೃದ್ಧಿ ಮಾಡಲಾಗುತ್ತಿದೆ. ಹೀಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಹೆಚ್ಚು ನೀಡುವ ಮೂಲಕ ಟೂರಿಸಂ ಹಬ್ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ : ವರುಣ ಲೆಕ್ಕಿಸದೇ ಹರಿದು ಬಂದ ಪ್ರವಾಸಿಗರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.