ಶಿವಮೊಗ್ಗ: ಕೈಗಾರಿಕಾ ಭದ್ರತಾ ಪಡೆಯ ಕಮಾಂಡೆಂಟ್ ಕಚೇರಿಗೆ ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿದರು.
ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರದ ಹಳೇ ಜೈಲು ಆವರಣದಲ್ಲಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಮಾಂಡೆಂಟ್ ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಪೊಲೀಸ್ ಮಹಾನಿರ್ದೇಶಕರಿಗೆ ಕೈಗಾರಿಕಾ ಭದ್ರತಾ ಪಡೆಯಿಂದ ಗಾರ್ಡ್ ಆಫ್ ಹಾನರ್ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶೇಖರ್ ಹಾಗೂ ಡಿವೈಎಸ್ಪಿ ಪ್ರಶಾಂತ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.