ಶಿವಮೊಗ್ಗ: ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅನಾನಸ್ ಹಾಗೂ ಶುಂಠಿ ಸೇರಿದಂತೆ ಇತರ ಬೆಳೆಗಳು ನಾಶವಾಗಿರುವ ಕುರಿತು ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಶಿವಮೊಗ್ಗದ ಜಿಲ್ಲಾ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ಡೌನ್ ನಂತರ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಅರಿಯಲು ನಾನು ಜಿಲ್ಲಾ ಪ್ರವಾಸ ಮಾಡುತ್ತಿದ್ದೇನೆ. ಅದರಂತೆ ಶಿವಮೊಗ್ಗದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕೃಷಿಗೆ ಪೂರಕವಾದ ವಸ್ತುಗಳು ರೈತರಿಗೆ ಸಿಗುವಂತೆ ಮಾಡಬೇಕು. ಕೃಷಿ ಚಟುವಟಿಕೆಗಳು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಅವರು ಹೇಳಿದರು.
ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಟ್ರ್ಯಾಕ್ಟರ್ ರಿಪೇರಿ ಮಾಡಲು ಗ್ಯಾರೇಜ್ ತೆರೆಯುವಂತೆ ತಿಳಿಸಿದರು.