ETV Bharat / state

ಮಂಗನ ಕಾಯಿಲೆ ನಿಯಂತ್ರಣಕ್ಕೆ ಶಿವಮೊಗ್ಗ ಜಿಲ್ಲಾಡಳಿತ ಸನ್ನದ್ಧ.. - ಶಿವಮೊಗ್ಗ ಮಂಗನ ಕಾಯಿಲೆ ಲೆಟೆಸ್ಟ್ ನ್ಯೂಸ್

ಯಾವುದೇ ರೋಗಾಣು ಪತ್ತೆಯಾಗಿಲ್ಲ. ಸದ್ಯ ಸರ್ವೇಕ್ಷಣಾ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಶಂಕಿತ ಹಾಗೂ ಬಾಧಿತ ಪ್ರದೇಶಗಳಿಂದ 467 ಜ್ವರ ಪ್ರಕರಣಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದಲ್ಲಿ ಆರ್‌ಟಿಪಿಸಿಆರ್/ಐಜಿಎಂ ಪರೀಕ್ಷೆ ನಡೆಸಲಾಗಿದೆ. ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ತಿಳಿಸಿದರು.

District administration ready to control disease in Shimogga
ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಸನ್ನದ್ಧ : ಡಾ.ರಾಜೇಶ ಸುರಗಿಹಳ್ಳಿ
author img

By

Published : Dec 18, 2019, 8:52 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೆ ಕೆಎಫ್‍ಡಿ ವೈರಾಣು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರದೇಶದಲ್ಲಿ ಮಂಗನ ಕಾಯಿಲೆ ಕಂಡು ಬಂದಿಲ್ಲ. ರೋಗ ನಿಯಂತ್ರಣಕ್ಕೆ ಮುಂಜಾಗರೂಕತಾ ಕ್ರಮವಾಗಿ 2.20ಲಕ್ಷ ಡೋಸ್ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ 1.60 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಇನ್ನುಳಿದಂತೆ 60ಸಾವಿರ ಡೋಸ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ, 45ಸಾವಿರ ಡಿಎಂಪಿ ತೈಲದ ದಾಸ್ತಾನು ಲಭ್ಯವಿದೆ. ಈಗಾಗಲೇ 30ಸಾವಿರ ಡಿಎಂಪಿ ತೈಲವನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಅಲ್ಲದೇ 50 ಮೀಟರ್ ಪರಿಧಿಯಲ್ಲಿ ಮೆಲಾಥಿಯಾನ್ ಸಿಂಪಡಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕಿಗೆ ಈವರೆಗೆ 2 ಕ್ವಿಂಟಾಲ್ ಮೆಲಾಥಿಯಾನ್ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.

ಸರ್ವೇಕ್ಷಣಾ ಕಾರ್ಯಾಚರಣೆ: ಜಿಲ್ಲೆಯಾದ್ಯಂತ ಕೆಎಫ್‌ಡಿ ನಿಯಂತ್ರಣ ಸರ್ವೇಕ್ಷಣಾ ಕಾರ್ಯ ನಿರಂತರವಾಗಿ ನಡೆಸಲಾಗುತ್ತಿದೆ. ಎಲ್ಲಾ ಕೆಎಫ್‌ಡಿ ಬಾಧಿತ ಪ್ರದೇಶಗಳಿಂದ 205 ಉಣುಗುಗಳನ್ನು ಸಂಗ್ರಹಿಸಿ ಕೆಎಫ್‌ಡಿ ವೈರಾಣು ಪರೀಕ್ಷೆ ನಡೆಸಲಾಗಿದೆ. ಈವರೆಗೂ ಯಾವುದೇ ರೋಗಾಣು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ 120 ಮಂಗಗಳು ಈವರೆಗೂ ಮೃತಪಟ್ಟಿವೆ. ಇವುಗಳಲ್ಲಿ ಅಂಗಾಂಶ ಸಂಗ್ರಹಣೆಗೆ ಯೋಗ್ಯವಾದ 18 ಮಂಗಗಳಿಂದ ಸೂಕ್ತ ಅಂಗಾಂಶ ಸಂಗ್ರಹಿಸಿ ಕೆಎಫ್‌ಡಿ ಪರೀಕ್ಷೆ ನಡೆಸಲಾಗಿದೆ.

ಯಾವುದೇ ರೋಗಾಣು ಪತ್ತೆಯಾಗಿಲ್ಲ. ಸದ್ಯ ಸರ್ವೇಕ್ಷಣಾ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಶಂಕಿತ ಹಾಗೂ ಬಾಧಿತ ಪ್ರದೇಶಗಳಿಂದ 467 ಜ್ವರ ಪ್ರಕರಣಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದಲ್ಲಿ ಆರ್‌ಟಿಪಿಸಿಆರ್/ಐಜಿಎಂ ಪರೀಕ್ಷೆ ನಡೆಸಲಾಗಿದೆ. ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ತಿಳಿಸಿದರು.

ಕೆಎಫ್‌ಡಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್, ಹೆದ್ದೂರು, ಶೇಡ್ಗಾರ್, ಸಾಲ್ಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮತ್ತು ತೀರ್ಥಹಳ್ಳಿ ತಾಲೂಕಿನ ತಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಂತರ್ ಇಲಾಖಾ ಸಮನ್ವಯ ಸಭೆಯನ್ನು ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಆರ್‌ಆರ್‌ಟಿ ತಂಡವನ್ನು ರಚಿಸಿ ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರ ಸಿಬ್ಬಂದಿಗೆ ಕೆಎಫ್‌ಡಿ ರೋಗ ನಿಯಂತ್ರಣ ಕಾರ್ಯಕ್ರಮದ ಪುನರ್ಮನನ ಹಾಗೂ ಹೆಚ್ಚಿನ ತರಬೇತಿ ನೀಡಲಾಗಿದೆ ಎಂದು ಹೇಳಿದರು.

Intro:ಶಿವಮೊಗ್ಗ,

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಸನ್ನದ್ದ: ಡಾ.ರಾಜೇಶ ಸುರಗಿಹಳ್ಳಿ

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದುವರೆಗೆ ಕೆಎಫ್‍ಡಿ ವೈರಾಣು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಪ್ರದೇಶದಲ್ಲಿ ಮಂಗನ ಕಾಯಿಲೆ ಕಂಡು ಬಂದಿಲ್ಲ. ರೋಗ ನಿಯಂತ್ರಣಕ್ಕೆ ಮುಂಜಾಗರೂಕತಾ ಕ್ರಮವಾಗಿ 2.20ಲಕ್ಷ ಡೋಸ್ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ 1.60 ಲಕ್ಷ ಡೋಸ್ ಲಸಿಕೆ ನೀಡಲಾಗಿದ್ದು, ಇನ್ನುಳಿದ 60ಸಾವಿರ ಡೋಸ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ 45ಸಾವಿರ ಡಿ.ಎಂ.ಪಿ ತೈಲದ ದಾಸ್ತಾನು ಲಭ್ಯವಿದ್ದು, ಈಗಾಗಲೇ 30ಸಾವಿರ ಡಿ.ಎಂ.ಪಿ ತೈಲವನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಅಲ್ಲದೇ 50 ಮೀಟರ್ ಪರಿಧಿಯಲ್ಲಿ ಮೆಲಾಥಿಯಾನ್ ಸಿಂಪಡಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿಗೆ ಇದುವರೆಗೆ 2 ಕ್ವಿಂಟಾಲ್ ಮೆಲಾಥಿಯಾನ್ ಸರಬರಾಜು ಮಾಡಲಾಗಿದೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ವೇಕ್ಷಣಾ ಕಾರ್ಯಾಚರಣೆ: ಜಿಲ್ಲೆಯಾದ್ಯಂತ ಕೆ.ಎಫ್.ಡಿ  ನಿಯಂತ್ರಣ ಸರ್ವೇಕ್ಷಣಾ ಕಾರ್ಯ ನಿರಂತರವಾಗಿ ನಡೆಸಲಾಗುತ್ತಿದೆ. ಎಲ್ಲಾ ಕೆ.ಎಫ್.ಡಿ ಬಾಧಿತ ಪ್ರದೇಶಗಳಿಂದ 205 ಉಣುಗುಗಳನ್ನು ಸಂಗ್ರಹಿಸಿ ಕೆ.ಎಫ್.ಡಿ ವೈರಾಣು ಪರೀಕ್ಷೆ ನಡೆಸಲಾಗಿದ್ದು, ಇದುವರೆಗೂ  ಯಾವುದೇ ರೋಗಾಣು ದೃಢಪಟ್ಟಿಲ್ಲ. ಈವರೆಗೆ ಜಿಲ್ಲೆಯಲ್ಲಿ 120 ಮಂಗಗಳು ಮೃತಪಟ್ಟು, ಇವುಗಳಲ್ಲಿ  ಅಂಗಾಂಶ ಸಂಗ್ರಹಣೆಗೆ ಯೋಗ್ಯವಾದ 18 ಮಂಗಗಳಿಂದ ಸೂಕ್ತ ಅಂಗಾಂಶ ಸಂಗ್ರಹಿಸಿ ಕೆ.ಎಫ್.ಡಿ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ರೋಗಾಣು ಪತ್ತೆಯಾಗಿಲ್ಲ. ಸರ್ವೇಕ್ಷಣಾ ಕಾರ್ಯವನ್ನು ತೀವ್ರಗೊಳಿಸಲಾಗಿದೆ.

ಕೆ.ಎಫ್.ಡಿ  ಸರ್ವೇಕ್ಷಣಾ ಕಾರ್ಯ ಜಿಲ್ಲೆಯಾದ್ಯಂತ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶಂಕಿತ ಹಾಗೂ ಬಾಧಿತ ಪ್ರದೇಶಗಳಿಂದ 467 ಜ್ವರ ಪ್ರಕರಣಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದಲ್ಲಿ ಆರ್.ಟಿ.ಪಿ.ಸಿ.ಆರ್/ಐ.ಜಿ.ಎಂ. ಪರೀಕ್ಷೆ ನಡೆಸಲಾಗಿದೆ. ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ಅವರು ಹೇಳಿದ್ದಾರೆ.

ಕೆ.ಎಫ್.ಡಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸಾಗರ ತಾಲ್ಲೂಕಿನ ಅರಳಗೋಡು ಗ್ರಾಮ ಪಂಚಾಯತ್, ಹೆದ್ದೂರು, ಶೇಡ್ಗಾರ್, ಸಾಲ್ಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ತಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಂತರ್ ಇಲಾಖಾ ಸಮನ್ವಯ ಸಭೆಯನ್ನು ನಡೆಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆರ್.ಆರ್.ಟಿ  ತಂಡವನ್ನು  ರಚಿಸಿ ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರ ಸಿಬ್ಬಂದಿಗಳಿಗೆ ಕೆ.ಎಫ್.ಡಿ ರೋಗ ನಿಯಾಂತ್ರಣ ಕಾರ್ಯಕ್ರಮದ ಪುನರ್ಮನನ ಹಾಗೂ ಹೆಚ್ಚಿನ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.