ETV Bharat / state

ಅತಿಸಣ್ಣ ಆಹಾರ ಸಂಸ್ಕರಣಾ ಉದ್ದಿಮೆ ಉತ್ತೇಜನ ಯೋಜನೆಯಡಿ ಅನಾನಸ್​ ಆಯ್ಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ - Food Processing Industry

ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ ಅತಿಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಾನಸ್​ ಬೆಳೆಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

District Collector KB Shivakumar  Meeting with officials
ಅತಿಸಣ್ಣ ಆಹಾರ ಸಂಸ್ಕರಣಾ ಉದ್ದಿಮೆ ಉತ್ತೇಜನ ಯೋಜನೆಯಡಿ ಅನಾನಸ್​ ಆಯ್ಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​
author img

By

Published : Aug 5, 2020, 8:52 PM IST

ಶಿವಮೊಗ್ಗ: ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ ಅತಿಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಾನಸ್​ ಹಾಗೂ ಎರಡನೇ ಹಂತದಲ್ಲಿ ಕಾಳು ಮೆಣಸು ಹಾಗೂ ಕುಂಬಳಕಾಯಿಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯೋಜನೆ ಅನುಷ್ಟಾನ ಕುರಿತು ಬೇಸ್‍ಲೈನ್ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಯೋಜನೆಯಡಿ ಬೇಗನೆ ಹಾಳಾಗುವ ಉತ್ಪನ್ನಗಳ ಉದ್ದಿಮೆಗಳಿಗೆ ನೆರವು ಒದಗಿಸಲಾಗುತ್ತಿದ್ದು, ಪ್ರತಿ ಜಿಲ್ಲೆಯಲ್ಲಿ ಒಂದು ಉತ್ಪನ್ನವನ್ನು ಗುರುತಿಸಿ ಅಂತಿಮಗೊಳಿಸಬೇಕಾಗಿದೆ. ಜಿಲ್ಲೆಯ1,400 ಹೆಕ್ಟೇರ್ ಪ್ರದೇಶದಲ್ಲಿ 56 ಸಾವಿರ ಮೆಟ್ರಿಕ್ ಟನ್ ಅನಾನಸ್​ ಬೆಳೆಯಲಾಗುತ್ತಿದೆ. ಇದರಲ್ಲಿ ಶೇ.10ರಷ್ಟನ್ನು ಮಾತ್ರ ಇಲ್ಲಿ ಸಂಸ್ಕರಿಸಲಾಗುತ್ತಿದೆ. ಯೋಜನೆಯ ಸಮರ್ಪಕ ಅನುಷ್ಟಾನದಿಂದ ಅನಾನಸ್​ ಬೆಳೆಗೆ ಇನ್ನಷ್ಟು ಉತ್ತೇಜನ ಸಾಧ್ಯವಿದೆ ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್​ ಕುಮಾರ್ ಮಾತನಾಡಿ, ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಿಗಳು, ಎಫ್‍ಪಿಒಗಳು, ಸ್ವಸಹಾಯ ಗುಂಪುಗಳು ಹಾಗೂ ಸಹಕಾರಿಗಳ ಸಾಲ ಸೌಲಭ್ಯವನ್ನು ಹೆಚ್ಚಿಸುವುದು. ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಬಲಪಡಿಸುವುದು. ಸಾಮಾನ್ಯ ಸಂಸ್ಕರಣಾ ಸೌಲಭ್ಯ, ಪ್ರಯೋಗಾಲಯ, ದಾಸ್ತಾನು, ಪ್ಯಾಕೇಜಿಂಗ್ ಹಾಗೂ ಇನ್‍ಕ್ಯುಬೇಷನ್ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದೇ ರೀತಿ ತಾಂತ್ರಿಕ ಸಂಸ್ಥೆಗಳನ್ನು ಬಲಪಡಿಸುವುದು, ಆಹಾರ ಸಂಸ್ಕರಣಾ ವಲಯದಲ್ಲಿ ಸಂಶೋಧನೆ ಹಾಗೂ ತರಬೇತಿಗೆ ಪ್ರೋತ್ಸಾಹ ನೀಡುವುದು. ಉದ್ದಿಮೆಗಳಿಗೆ ವೃತ್ತಿಪರ ಹಾಗೂ ತಾಂತ್ರಿಕ ಬೆಂಬಲ ಒದಗಿಸುವುದು ಇದರಲ್ಲಿ ಸೇರಿದೆ.

ಯೋಜನೆಯಡಿ ವೈಯಕ್ತಿಕ ಅತಿಸಣ್ಣ ಉದ್ದಿಮೆಗಳಿಗೆ ಪ್ರತಿ ಘಟಕಕ್ಕೆ 10ಲಕ್ಷ ರೂ. ಗರಿಷ್ಠ ಮಿತಿಯೊಂದಿಗೆ ಯೋಜನಾ ವೆಚ್ಚದ ಶೇ. 35ರಷ್ಟು ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಫಲಾನುಭವಿ ಕೊಡುಗೆ ಕನಿಷ್ಠ ಶೇ. 10ರಷ್ಟಿದ್ದು, ಬಾಕಿ ಬ್ಯಾಂಕಿನ ಸಾಲ ಒದಗಿಸಲಾಗುವುದು. ರೈತ ಉತ್ಪಾದಕರ ಸಂಸ್ಥೆಗಳಿಗೆ ಸಹ ಸಮಾನ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.