ಶಿವಮೊಗ್ಗ: ಸಾಗರದ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಇಂದು ದಿಢೀರ್ ಭೇಟಿ ನೀಡಿದ್ದಾರೆ.
ಸಾಗರ ತಾಲೂಕಿನ ಕೆಳದಿಯ ಬಂದಗದ್ದೆಯ ಬಾಲಕರ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ. ಈ ಸೆಂಟರ್ಅನ್ನು ಇತ್ತಿಚೇಗೆ ತೆರೆಯಲಾಗಿದ್ದು, ಇಂದು ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿದ ಕಾರಣ ಅಧಿಕಾರಿಗಳು ಕಸಿವಿಸಿಗೊಂಡಿದ್ದರು. ನಂತರ ಸೋಂಕಿತರ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ, ಇಲ್ಲಿ ಸಿಗುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ ಮೂಲಭೂತ ಸೌಕರ್ಯದ ಕೊರತೆಗಳ ಬಗ್ಗೆ ಚರ್ಚಿಸಿದರು. ನಂತರ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದರು.
ಮಿನಿ ವಿಧಾನಸೌಧ ಕಾಮಗಾರಿ ಪ್ರಾರಂಭಿಸಲು ಸೂಚನೆ:
ಸಾಗರ ತಾಲೂಕು ಮಿನಿ ವಿಧಾನಸೌಧದ ಕಾಮಗಾರಿಯ ನೀಲನಕ್ಷೆಯನ್ನು ವೀಕ್ಷಿಸಿದರು. ಸಾಗರದ ಕೋರ್ಟ್ ಪಕ್ಕದಲ್ಲಿ ಆದಷ್ಟು ಬೇಗ ಕಾಮಗಾರಿಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಸಾಗರದ ಉಪ ವಿಭಾಗಾಧಿಕಾರಿ ನಾಗರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.