ETV Bharat / state

ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್.. - Gazanur Morarji Desai Residential School

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ. ಲಕ್ಷಣ ರಹಿತ ಸೋಂಕಿತರನ್ನು ಅಲ್ಲಿಗೆ ಸೇರಿಸಲಾಗುತ್ತದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್​ನಲ್ಲಿ 33 ಜನರನ್ನು ಸೇರಿಸಲಾಗಿದೆ. ಇಂದು ಮತ್ತೆ 30 ಜನ ಅಲ್ಲಿಗೆ ದಾಖಲಾಗಲಿದ್ದಾರೆ..

Covid Care Center
ಕೋವಿಡ್ ಕೇರ್ ಸೆಂಟರ್
author img

By

Published : Jul 5, 2020, 4:14 PM IST

ಶಿವಮೊಗ್ಗ : ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್​ಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಭೇಟಿ ನೀಡಿದರು.

ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ. ಲಕ್ಷಣ ರಹಿತ ಸೋಂಕಿತರನ್ನು ಅಲ್ಲಿಗೆ ರವಾನಿಸಲಾಗುತ್ತದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್​ನಲ್ಲಿ 33 ಜನರನ್ನು ಸೇರಿಸಲಾಗಿದೆ. ಇಂದು ಮತ್ತೆ 30 ಜನ ಅಲ್ಲಿಗೆ ದಾಖಲಾಗಲಿದ್ದಾರೆ ಎಂದರು.

ಇದರಿಂದ ಗಂಭೀರವಾಗಿರುವ ರೋಗಿಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದರು. ಹಾಗಾಗಿ ಅಲ್ಲಿಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಬಂದಿರುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.