ETV Bharat / state

'ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಯಶಸ್ಸಿಗೆ ಒಗ್ಗಟ್ಟಿನಿಂದ ಕೆಲಸ'

author img

By

Published : Jun 27, 2020, 10:06 PM IST

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

Shimogga
ಸುದ್ದಿಗೋಷ್ಟಿ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್​ ಅವರು ಬೆಂಗಳೂರಿನ ಕೆಪಿಸಿಸಿ ನೂತನ ಕಟ್ಟಡದ ಸಭಾಂಗಣದಲ್ಲಿ ಜು.2 ಬೆಳಿಗ್ಗೆ 11 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.11 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದರು. ಕೊರೊನಾದಿಂದಾಗಿ ಪದಗ್ರಹಣ ಸಮಾರಂಭ ತಡವಾಗಿ ನಡೆಯುತ್ತಿದೆ ಎಂದರು. ಕೊರೊನಾ ಸಂಕಷ್ಟದ ಕಾಲದಲ್ಲಿ ಈ ಸಮಾರಂಭಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮಾರಂಭಕ್ಕೆ ಭಾಗವಹಿಸಲು ಸಾಧ್ಯವಾಗದ ಕಾರಣ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ರಾಜ್ಯಾದ್ಯಂತ ನೇರ ಪ್ರಸಾರದ ಮೂಲಕ ಮಾದರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಎಲ್ಲಾ ವಾರ್ಡ್​ಗಳಲ್ಲಿ ಏಕ ಕಾಲದಲ್ಲಿ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ. 350 ಸ್ಥಳಗಳಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದು, ಕಾರ್ಯಕ್ರಮದ ನೇರಪ್ರಸಾರ ಮಾಡಲಾಗುವುದು ಎಂದರು.

ಇನ್ನು ನೂತನ ಅಧ್ಯಕ್ಷರೊಂದಿಗೆ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಹಾಗೂ ಸತೀಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಲಿದ್ದಾರೆ. ಏಕಕಾಲದಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಮೊದಲಿಗೆ ಜ್ಯೋತಿ ಬೆಳಗಿಸುವುದು ನಂತರ ವಂದೇ ಮಾತರಂ ಹೇಳುವುದು, ತದನಂತರ ಡಾ.ಬಿ.ಆರ್.ಅಂಬೇಡ್ಕರ್​ರವರ ಸಂವಿಧಾನ ಪೀಠದ ಎದುರು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಲಿದ್ದಾರೆಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಅ.ಗಾ. ಸುಲ್ತಾನ್, ರಾಮಲಿಂಗ, ತೀ.ನಾ. ಶ್ರೀನಿವಾಸ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಬಲ್ಕಿಷ್‌ಬಾನು ಮತ್ತಿತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.