ಶಿವಮೊಗ್ಗ: ಅನುಮಾನಾಸ್ಪದ ವ್ಯಕ್ತಿಗಳಾಗಲಿ, ವಸ್ತುಗಳಾಗಲಿ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲಾದ್ಯಂತ ಸೂಕ್ಷ್ಮ ಸ್ಥಳಗಳಲ್ಲಿ ಗಸ್ತು ಚುರುಕುಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಅನುಮಾನಾಸ್ಪದವಾಗಿ ಏನೇ ಕಂಡರೂ ಪೊಲೀಸ್ ಕಂಟ್ರೋಲ್ ರೂಂ. 9480803300ಕ್ಕೆ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ. ಅಲ್ಲದೇ ಮಾಹಿತಿ ನೀಡುವವರ ವಿವರವನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.