ETV Bharat / state

ಫೇಸ್​ಬುಕ್​​ನಲ್ಲಿ ಪಿಎಂಗೆ ನಿಂದನೆ: ಶಿವಮೊಗ್ಗ ಜಿಲ್ಲಾ ಬಿಜೆಪಿ Social Media ತಂಡದಿಂದ ದೂರು - ಫೇಸ್​ಬುಕ್​​ನಲ್ಲಿ ಪಿಎಂ ಮೋದಿ ವಿರುದ್ಧ ನಿಂದನೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್​ಬುಕ್​​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸದಸ್ಯರು ದೂರು ದಾಖಲಿಸಿದ್ದಾರೆ.

District social media team register complaint in Shimoga
ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಿಂದ ದೂರು ದಾಖಲು
author img

By

Published : Sep 6, 2021, 3:14 PM IST

ಶಿವಮೊಗ್ಗ: ಸಾಮಾಜಿಕ ಜಾಲತಾಣ ಫೇಸ್​ಬುಕ್​​ನಲ್ಲಿ ಪಿಎಂ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸದಸ್ಯರು ದೂರು ನೀಡಿದ್ದಾರೆ.

complaint copy
ದೂರಿನ ಪ್ರತಿ

ಫೇಸ್​​ಬುಕ್​​​​ನಲ್ಲಿ ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಮೋಹನ್ ಕುಮಾರ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದು ದೇಶಕ್ಕೆ ಮಾಡಿದ ಅಪಮಾನವಾಗಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣವನ್ನು ದರ್ಬಳಕೆ ಮಾಡಿಕೊಳ್ಳಲಾಗಿದೆ.

ಇದರಿಂದ ಮೋಹನ್ ಎಂಬುವವರನ್ನು ಪೊಲೀಸರು ತಕ್ಷಣ ಬಂಧಿಸಿ ಶಿಕ್ಷೆ ನೀಡಬೇಕೆಂದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಸದಸ್ಯರು ದೂರು ನೀಡಿದ್ದಾರೆ. ಈ ವೇಳೆ ಜಿಲ್ಲಾ ಸಂಚಾಲಕ ಶರತ್ ಕಲ್ಯಾಣ್​, ಸಹ ಸಂಚಾಲಕ ದಿನೇಶ್ ಆಚಾರ್ಯ, ಶ್ರೀನಾಗ್ ಹಾಜರಿದ್ದರು.

ಓದಿ: ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.