ಶಿವಮೊಗ್ಗ: ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ದರಾಗಬೇಕೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಮುಂಬರುವ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರು ಸನ್ನದರಾಗಬೇಕು ಎಂದರು.
ಕೊರೊನಾ ಸಂಕಷ್ಟದಲ್ಲಿರುವ ಜನರ ನೇರವಿಗೆ ಹಾಗೂ ಕೋವಿಡ್ನಿಂದ ಮೃತರಾದ ಕುಟುಂಬದ ನೇರೆವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ದಾವಿಸುವ ಮೂಲಕ ಅವರಿಗೆ ನೇರವಾಗಬೇಕೆಂದು ತಿಳಿಸಿರುವ ಡಿಕೆಶಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದರು.
ಇದನ್ನೂ ಓದಿರಿ: ತಾಂಡಗಳ ಭೇಟಿ ರಾಜಕಾರಣಕ್ಕಲ್ಲ, ಜನರ ಸಮಸ್ಯೆ ಆಲಿಸಲು: ಡಿ.ಕೆ.ಶಿವಕುಮಾರ್
ಕೋವಿಡ್ ನಿಯಮ ಬ್ರೇಕ್: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸರ್ಕಾರದ ಕೋವಿಡ್ ನಿಯಮ ಗಾಳಿಗೆ ತೂರಲಾಗಿತ್ತು. ನೂರಾರು ಜನ ಕಾರ್ಯಕರ್ತರು ಯಾವುದೇ ಸಾಮಾಜಿಕ ಅಂತರವಿಲ್ಲದೇ ಡಿ.ಕೆ ಶಿವಕುಮಾರ್ ಅವರೊಂದಿಗೆ ಸೆಲ್ಫಿ ತೇಗೆದುಕೊಳ್ಳಲು ಹಾಗೂ ಸನ್ಮಾನ ಮಾಡಲು ಮುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಮಂತ್ರ-ಗೋಷಗಳ ಮೂಲಕ ಡಿ.ಕೆ ಶಿವಕುಮಾರ್ಗೆ ಹಾರೈಕೆ ಮಾಡಿದರು. ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಮಂತ್ರ-ಗೋಷಗಳನ್ನು ಪಟಿಸುವ ಮೂಲಕ ಡಿಕೆಶಿಗೆ ಹಾರೈಸಲಾಯಿತು. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದ್ರೇಶ್, ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ, ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.