ETV Bharat / state

ಶಿವಮೊಗ್ಗ: ವೃದ್ಧೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ ಗೆಡ್ಡೆ ಹೊರ ತೆಗೆದ ವೈದ್ಯರು - ವೃದ್ದೆ ಹೊಟ್ಟೆಯಲ್ಲಿ 4 ಕೆಜಿ ಗಾತ್ರದ ಗೆಡ್ಡೆ

ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 4 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ತೀರ್ಥಹಳ್ಳಿ ವೈದ್ಯರ ತಂಡ ಯಶಸ್ವಿಯಾಗಿದೆ.

tumor
ವೃದ್ಧೆಯ ಹೊಟ್ಟೆಯಲ್ಲಿದ್ದ ಗೆಡ್ಡೆ ಹೊರ ತೆಗೆದ ವೈದ್ಯರು
author img

By

Published : Sep 18, 2022, 11:00 AM IST

ಶಿವಮೊಗ್ಗ: 65 ವರ್ಷದ ವೃದ್ಧೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ ತೂಕದ ಗೆಡ್ಡೆಯನ್ನು ತೀರ್ಥಹಳ್ಳಿ ವೈದ್ಯರ ತಂಡ ಯಶಸ್ವಿಯಾಗಿ ಹೊರ ತೆಗೆದಿದೆ. ಜಯ ಚಾಮರಾಜೇಂದ್ರ ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ.ರಂಗಸ್ವಾಮಿ, ಡಾ. ಸುಮ ಹಾಗೂ ಇತರರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ.

ಭದ್ರಾವತಿ ತಾಲೂಕಿನ ಅಂತರಗಂಗೆ ನಿವಾಸಿ ಶಾರದಮ್ಮ(65) ಎಂಬುವರು ಬಹು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಂತರ ಸ್ಥಳೀಯ ವೈದ್ಯರ ಬಳಿ ತೋರಿಸಿದಾಗ ಅವರ ಹೊಟ್ಟೆಯಲ್ಲಿ ಗೆಡ್ಡೆ ಇರುವುದನ್ನು ಖಚಿತಪಡಿಸಿದ್ದಾರೆ.

ವೃದ್ಧೆಯ ಹೊಟ್ಟೆಯಲ್ಲಿದ್ದ ಗೆಡ್ಡೆ ಹೊರ ತೆಗೆದ ವೈದ್ಯರು

ಇದನ್ನೂ ಓದಿ: ಮಹಿಳೆ ಹೊಟ್ಟೆಯಲ್ಲಿತ್ತು 4 ಕೆಜಿ ಮಾಂಸದುಂಡೆ...! ಇಲ್ಲಿದೆ ಲೈವ್​ ಆಪರೇಷನ್​ ವಿಡಿಯೋ!

ಶಾರದಮ್ಮ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಾದ ರಂಗಸ್ವಾಮಿ ಹಿಂದೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇದರಿಂದ ಶಾರದಮ್ಮ ಡಾ.ರಂಗಸ್ವಾಮಿ ಅವರ ಮೇಲೆ ವಿಶ್ವಾಸವಿಟ್ಟು ಅವರ ಬಳಿಯೇ ತೆರಳಿ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಸದ್ಯಕ್ಕೆ ವೃದ್ಧೆ ಆರೋಗ್ಯವಾಗಿದ್ದು, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾರದಮ್ಮ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಸಾಗರ: ಮಹಿಳೆ ಹೊಟ್ಟೆಯಲ್ಲಿದ್ದ 7 ಕೆಜಿ ಗೆಡ್ಡೆ ಹೊರ ತೆಗೆದ ವೈದ್ಯರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.