ETV Bharat / state

ಡಬಲ್​ ಇಂಜಿನ್​ ಸರ್ಕಾರದ ಕಾರ್ಯಸಾಧನೆ ಪ್ರತಿ ಮನೆಗೂ ತಲುಪಿಸಿ: ಕಾರ್ಯಕರ್ತರಿಗೆ ಮೋದಿ ಕಿವಿಮಾತು - ಪ್ರಧಾನಮಂತ್ರಿ ನರೇಂದ್ರ ಮೋದಿ ಕಿವಿಮಾತು

ಆನ್​ಲೈನ್​ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದ್ರು.

Online interaction with PM Modi with workers
ಆನ್​ಲೈನ್​ ಮೂಲಕ ಪ್ರಧಾನಿ ಮೋದಿ ಕಾರ್ಯಕರ್ತರೊಂದಿಗೆ ಸಂವಾದ
author img

By

Published : Apr 27, 2023, 8:11 PM IST

ಆನ್​ಲೈನ್​ ಮೂಲಕ ಪ್ರಧಾನಿ ಮೋದಿ ಕಾರ್ಯಕರ್ತರೊಂದಿಗೆ ಸಂವಾದ

ಶಿವಮೊಗ್ಗ: ಡಬಲ್ ಇಂಜಿನ್ ಸರ್ಕಾರಗಳು ದೇಶ ಹಾಗೂ ರಾಜ್ಯಗಳಲ್ಲಿ ನಡೆಸಿರುವ ಅಭಿವೃದ್ಧಿಯನ್ನು ಮತದಾರರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.

ಇಂದು ಕಾರ್ಯಕರ್ತರೊಂದಿಗೆ ಆನ್​ಲೈನ್​ ಮೂಲಕ ನಡೆಸಿದ ಸಂವಾದದಲ್ಲಿ, ಶಿವಮೊಗ್ಗ ಸವಾಲಿನ ಕ್ಷೇತ್ರವಾಗಿದೆ.‌ ಪ್ರಸ್ತುತ ಗೊಂದಲದ ವಾತಾವರಣವಿದೆ. ಇಂತಹ ಸಂದರ್ಭದಲ್ಲಿ ಬೂತ್ ಮಟ್ಷದಲ್ಲಿ ಹೇಗೆ ಕಾರ್ಯ ನಿರ್ವಹಿಸಬೇಕು, ಜನರಿಗೆ ಹೇಗೆ ತಲುಪಬೇಕು ಎಂಬ ಪ್ರಶ್ನೆಯನ್ನು ಕಾರ್ಯಕರ್ತರು ಕೇಳಿದ್ದರು‌. ಇದಕ್ಕೆ ಉತ್ತರಿಸಿದ ಮೋದಿ, ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಬೇಕಿದೆ. ಕೇವಲ ಮನೆ ಹೊರಗೆ ನಿಂತು ಪಾಂಪ್ಲೆಟ್ ಕೊಟ್ಟು ಬರಬೇಡಿ. ನೀವು ಮತದಾರರಿಗೆ ಏನು ಹೇಳಲು ಹೊರಟ್ಟಿದ್ದೀರಾ, ಅದು ನಿಮ್ಮ ಮೊಬೈಲ್, ಡೈರಿಯಲ್ಲಿ ಬರೆದಿಟ್ಟುಕೊಂಡಿರಬೇಕು ಎಂದು ಸಲಹೆ ನೀಡಿದರು.

ಮತದಾರರ ಮನೆಗೆ ಹೋದಾಗ ದೊಡ್ಡವರಿಗೆ ನಮಸ್ಕಾರ ಮಾಡಬೇಕು. ಸಣ್ಣ ಮಕ್ಕಳಿಗೆ ಪ್ರೀತಿ ತೋರಿಸಬೇಕು. ಬಿಜೆಪಿ ಸರ್ಕಾರದ ಯೋಜನೆಯನ್ನು, ಸಾಧನೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಡಬಲ್ ಇಂಜಿನ್ ಸರ್ಕಾರ ಯಾವ ರೀತಿ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಮಾಡುತ್ತಿದೆ ಎನ್ನುವುದರ ಬಗ್ಗೆ ಜನರಿಗೆ ತಿಳಿಸಿಕೊಡಿ. ನಮ್ಮ ಪಕ್ಷ ದೇಶದ ಅಭಿವೃದ್ಧಿ ಮಂತ್ರವನ್ನು ಜಪಿಸುತ್ತಿರುವುದರ ಬಗ್ಗೆ ಮತದಾರರಿಗೆ ಮನನ ಮಾಡಿಕೊಡಿ. ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸುತ್ತಿರುವುದರ ಬಗ್ಗೆ ಮತದಾರರಿಗೆ ಮಾಹಿತಿ ತಲುಪುವಂತೆ ಮಾಡಿ ಎಂದು ಮೋದಿ ಸಲಹೆ ನೀಡಿದ್ರು.

ಡಬಲ್ ಇಂಜಿನ್ ಸರ್ಕಾರ ಏನು ಮಾಡುತ್ತಿದೆ ಎಂಬುದು ತಿಳಿಸುವ ಅಗತ್ಯವಿದೆ. ಕೇವಲ ರಾಜಕೀಯ ಮಾಡದೇ, ಅಭಿವೃದ್ಧಿ ಮಾಡುವುದು ನಮ್ಮ ಪಣವಾಗಿದೆ. ಮೆಡಿಕಲ್ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆ ಮಾಡಲಾಗಿದೆ. ಭ್ರಷ್ಟಾಚಾರದ ವಿರುದ್ಧ ಡಬಲ್ ಇಂಜಿನ್ ಸರ್ಕಾರ ಪ್ರಹಾರ ಮಾಡಿದೆ. ಕಪ್ಪು ಹಣ ವರ್ಗಾವಣೆ ಬಗ್ಗೆ ನಿಗಾ ಇಟ್ಟಿದೆ. ಕೆಲವರ ಜೇಬು ಸೇರುತ್ತಿದ್ದ ಹಣ ಈಗ ಸರ್ಕಾರದ ಖಜಾನೆ ಸೇರುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಡಬಲ್ ಇಂಜಿನ್ ಸರ್ಕಾರ ಸಮರ ಸಾರಿದೆ. ರಾಜ್ಯವನ್ನು ಭ್ರಷ್ಟಾಚಾರ ಮುಕ್ತವಾಗಿಸಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.

ಸಾಮಾಜಿಕವಾಗಿ ಜಾಗೃತಗೊಳಿಸಲಾಗುತ್ತಿದೆ. ಕರ್ನಾಟಕದ ಜನರು, ಭಕ್ತಿ, ಯುಕ್ತಿ ಮೂಲಕ ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸುತ್ತಿದ್ದಾರೆ. ರಾಜ್ಯದ ಜನರು ಸಾಹಿತ್ಯವನ್ನು ತಮ್ಮ ಉಸಿರನ್ನಾಗಿಸಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರ ಹೆಸರು ಪ್ರಸ್ತಾಪಿಸಿದ ಅವರು, ಕರ್ನಾಟಕದ ಜೊತೆಗೆ ನನ್ನ ಅವಿನಾಭಾವ ಸಂಬಂಧವಿದೆ ಎಂದು ಹೇಳಿದರು.

ಕರ್ನಾಟಕದ ವಿಕಾಸಕ್ಕಾಗಿ ಹಲವಾರು ಜನರು ದುಡಿಯುತ್ತಿದ್ದಾರೆ. ಇವೆಲ್ಲವನ್ನೂ ನಾನು ಮನ್ ಕಿ ಬಾತ್​ನಲ್ಲಿ ಪ್ರಸ್ತಾಪಿಸಿದ್ದೇನೆ. ಕೆಲವೇ ದಿನಗಳಲ್ಲಿ ಮನ್ ಕಿ ಬಾತ್ ನೂರು ಕಾರ್ಯಕ್ರಮವಾಗಿಸುವ ಕಾರ್ಯಕ್ರಮವಾಗಲಿದೆ. ಇವೆಲ್ಲವೂ ನಿಮ್ಮಿಂದ ಸಾಧ್ಯವಾಗಿದೆ. ಸಂಸ್ಕೃತಿ, ಧಾರ್ಮಿಕತೆ, ಆಧುನಿಕ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಇತಿಹಾಸದ ಜೊತೆಗೆ ವರ್ತಮಾನದ ಬಗ್ಗೆಯೂ ಯೋಚಿಸಬೇಕಿದೆ. ಇಂದು ಒಂದು ಉತ್ತಮ ಸರ್ಕಾರದ ಕಾರ್ಯವೈಖರಿಯಾಗಿದೆ. ಬಿಜೆಪಿ ಶಾರ್ಟ್ ಕಟ್ ಪಕ್ಷವಲ್ಲ. ದೇಶಕ್ಕಾಗಿ ದುಡಿದಿರುವ, ದುಡಿಯುವ ಪಕ್ಷವಾಗಿದೆ. ಬಿಜೆಪಿ ಸರ್ಕಾರ ಹಲವು ಆಯಾಮಗಳಲ್ಲಿ, ಯೋಚಿಸಿ, ಯೋಜಿಸಿ ಕಾರ್ಯಸಾಧುವಾಗಿಸುತ್ತದೆ ಎಂದು ಮೋದಿ ಹೇಳಿದ್ರು.

ಈ ವೇಳೆ ಬಿಜೆಪಿಯ ಹಿರಿಯ ಮುಖಂಡರಾದ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

ಇದನ್ನೂ ಓದಿ: ಮೋದಿ ಸಾವು ಬಯಸುತ್ತಿರುವ ಕಾಂಗ್ರೆಸ್ ನಿರ್ಲಜ್ಜ ಪಕ್ಷ: ಕೇಂದ್ರ ಸಚಿವೆ ಸ್ಮೃತಿ‌ ಇರಾನಿ ಗರಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.