ETV Bharat / state

ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ : ಡಾ. ಸೆಲ್ವಮಣಿ - ಶಿವಮೊಗ್ಗದಲ್ಲಿ ಮಂಗನ ಕಾಯಿಲೆ

ಕ್ಯಾಸನೂರು ಕಾಡಿನ ಖಾಯಿಲೆಯ ನಿಯಂತ್ರಣ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಮತ್ತಷ್ಟು ಚುರುಕುಗೊಳಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಲಸಿಕೆಯ ಗುಣಮಟ್ಟ ಹಾಗೂ ಪರಿಣಾಮಕಾರಿ ನಿಯಂತ್ರಣ ಚಟುವಟಿಕೆಗಳ ಅನುಷ್ಟಾನಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದರು..

dr-selvamani
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ
author img

By

Published : Feb 7, 2022, 6:53 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಫ್‍ಡಿ (ಮಂಗನ ಕಾಯಿಲೆ) ನಿಯಂತ್ರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್‍ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಗುರುತಿಸಲಾಗಿರುವ ಹಾಟ್‍ಸ್ಪಾಟ್‍ಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು.

ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮಂಗ ಸತ್ತಿರುವುದು ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು. ಸತ್ತ ಪ್ರತಿಯೊಂದು ಮಂಗದಿಂದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಕ್ಯಾಸನೂರು ಕಾಡಿನ ಖಾಯಿಲೆಯ ನಿಯಂತ್ರಣ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಮತ್ತಷ್ಟು ಚುರುಕುಗೊಳಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿವೆ. ಲಸಿಕೆಯ ಗುಣಮಟ್ಟ ಹಾಗೂ ಪರಿಣಾಮಕಾರಿ ನಿಯಂತ್ರಣ ಚಟುವಟಿಕೆಗಳ ಅನುಷ್ಠಾನಕ್ಕೆ ಸಾಕ್ಷಿಯಾಗಿದೆ.

ಎನ್‍ಐವಿ ಪುಣೆಯವರು ಲಸಿಕಾ ಗುಣಮಟ್ಟ ಉತ್ತಮವಾಗಿಲ್ಲದಿರುವ ಬಗ್ಗೆ ಯಾವುದೇ ವರದಿ ನೀಡಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ತಿಳಿಸಿದರು.

ಸಂಖ್ಯಾ ವಿವರ : ಜಿಲ್ಲೆಯಲ್ಲಿ 2019ರಲ್ಲಿ 4956 ಮಾದರಿ ಪರೀಕ್ಷೆ ನಡೆಸಲಾಗಿದೆ. 445 ಕೆಎಫ್‍ಡಿ ಪ್ರಕರಣಗಳು ದೃಢಪಟ್ಟು 15 ಮಂದಿ ಮೃತಪಟ್ಟಿದ್ದರು. 1,15,957 ಮಂದಿಗೆ ಲಸಿಕೆ ಹಾಗೂ 37869 ಡಿಪಿಎಂ ತೈಲ ವಿತರಣೆ ಮಾಡಲಾಗಿತ್ತು. 2020ರಲ್ಲಿ 6975 ಮಾದರಿ ಪರೀಕ್ಷೆ ನಡೆಸಲಾಗಿದ್ದು, 287 ಕೆಎಫ್‍ಡಿ ಪ್ರಕರಣಗಳು ದೃಢಪಟ್ಟು 5 ಮಂದಿ ಮೃತಪಟ್ಟಿದ್ದರು.

106862 ಮಂದಿಗೆ ಲಸಿಕೆ ಹಾಗೂ 81995 ಡಿಪಿಎಂ ತೈಲ ವಿತರಣೆ ಮಾಡಲಾಗಿತ್ತು. 2021ರಲ್ಲಿ 4211 ಮಾದರಿ ಪರೀಕ್ಷೆ ನಡೆಸಲಾಗಿದ್ದು, 23 ಕೆಎಫ್‍ಡಿ ಪ್ರಕರಣಗಳು ದೃಢಪಟ್ಟು ಸಾವು ಸಂಭವಿಸಿಲ್ಲ. 132769 ಮಂದಿಗೆ ಲಸಿಕೆ ಹಾಗೂ 89720 ಡಿಪಿಎಂ ತೈಲ ವಿತರಣೆ ಮಾಡಲಾಗಿತ್ತು.

ಪ್ರಸ್ತುತ ವರ್ಷ 350 ಮಾದರಿ ಪರೀಕ್ಷೆ ನಡೆಸಲಾಗಿದೆ. 3 ಪ್ರಕರಣಗಳು ದೃಢಪಟ್ಟಿವೆ. ಯಾವುದೇ ಸಾವು ಸಂಭವಿಸಿರುವುದಿಲ್ಲ. ಇದುವರೆಗೆ 69991 ಮಂದಿಗೆ ಲಸಿಕೆ ಹಾಗೂ 21450 ಡಿಪಿಎಂ ತೈಲ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಲಸಿಕೆ ಲಭ್ಯತೆ : ಕ್ಯಾಸನೂರು ಕಾಡಿನ ಖಾಯಿಲೆಯ ಲಸಿಕೆಯನ್ನು 20ವರ್ಷಗಳಿಂದ ಐಎಎಚ್‍ವಿಬಿ ಬೆಂಗಳೂರಿನಲ್ಲಿ ತಯಾರಿಸಲಾಗುತ್ತಿದ್ದು, ಹಾಲಿ 50ಸಾವಿರ ಲಸಿಕೆ ತಯಾರಾಗಿರುತ್ತದೆ. ಸದರಿ ಲಸಿಕೆಯ ಗುಣಮಟ್ಟ ಪರೀಕ್ಷೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಉಪಯೋಗಕ್ಕೆ ಲಭ್ಯವಾಗಲಿದೆ.

ಮಾರ್ಗಸೂಚಿ ಪ್ರಕಾರ, ಕೋವಿಡ್ ಲಸಿಕೆ ಪಡೆದ ಎರಡು ವಾರಗಳ ನಂತರ ಲಭ್ಯವಿರುವ ಕೆಎಫ್‍ಡಿ ಲಸಿಕೆಯನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಜಿಲ್ಲೆಯಲ್ಲಿ ಬಿಎಸ್‍ಎಲ್-2 ಶ್ರೇಣಿಯ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಬಿಎಸ್‍ಎಲ್-3 ಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಎಲ್ ವೈಶಾಲಿ, ಆರ್​ಸಿಹೆಚ್ ಡಾ. ನಾಗರಾಜ ನಾಯಕ್, ಡಾ.ಅರುಣ್ ಕುಮಾರ್ ಸೇರಿದಂತೆ ಹಿರಿಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 3,200 ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.