ETV Bharat / state

ಶಿಕ್ಷಣ ಇಲಾಖೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ - ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ

ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಕಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಹೀಗೆ ಹಲವು ಸಮಸ್ಯೆಗಳು ಬಾಕಿ ಇವೆ ಎಂದು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬೇಸರ ವ್ಯಕ್ತಪಡಿಸಿದರು.

Education Department Officers Meeting
ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ
author img

By

Published : Jan 5, 2021, 2:45 AM IST

ಶಿವಮೊಗ್ಗ: ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಜಿಲ್ಲಾ ಪಂಚಾಯಿತಿಯಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ...ಕೋವಿಡ್ ಸಂಕಷ್ಟದಲ್ಲಿದ್ರೂ ಶಿವಮೊಗ್ಗಕ್ಕೆ ಹೆಚ್ಚಿನ ಯೋಜನೆಗಳು ಬರುತ್ತವೆ: ಜನತೆಯ ಆಶಯ

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಕಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಹೀಗೆ ಹತ್ತು ಹಲವು ಸಮಸ್ಯೆಗಳು ಬಾಕಿ ಇವೆ ಎಂದು ಬೇಸರ ವ್ಯಕ್ತಪಡಿಸಿದರು.

ವೇತನ, ಭತ್ಯೆಗಳ ಪಾವತಿಗೆ ಸಂಬಂಧಿಸಿದಂತೆ ಹೆಚ್​​ಆರ್​​ಎಂಎಸ್​​ನಲ್ಲಿ ತಾಂತ್ರಿಕ ದೋಷವಿದೆ ಎಂಬ ಆರೋಪವಿದೆ. ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿದೆ ಕೂಡಲೇ ವಿಚಾರಣೆ ಪೂರ್ಣಗೊಳಿಸಬೇಕು. ಶಿಕ್ಷಕರ ಮುಂಬಡ್ತಿಗೆ ಸಂಬಂಧಿಸಿದ ಕಡತಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಅವರಿಗೆ ಮನವಿ ಮಾಡಿದರು.

ಎಂ.ಎಲ್.ವೈಶಾಲಿ ಮಾತನಾಡಿ, ಮುಂಬಡ್ತಿ ಮತ್ತು ಕಾಲಮಿತಿ ಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಆಯಾ ಶಾಲೆಗಳಲ್ಲಿನ ಬಟವಾಡೆ ಅಧಿಕಾರಿಗಳು ಅಥವಾ ಪ್ರಥಮ ದರ್ಜೆ ಸಹಾಯಕರಿಗೆ ಹೆಚ್​​ಆರ್​​ಎಂಎಸ್ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಮುಂದುವರೆದರೆ ಶಾಲಾ ಅಥವಾ ಕಚೇರಿಯ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ

ಜಿಲ್ಲೆಯ ಯಾವುದೇ ಶಾಲೆಯಲ್ಲಿ ಕೋವಿಡ್‍ನ ಒಂದೂ ಪ್ರಕರಣವೂ ಗೋಚರಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಅಲ್ಲದೆ, ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ ತಹಶೀಲ್ದಾರರು ಖರೀದಿಸಿದ್ದ ಥರ್ಮಲ್ ಸ್ಕ್ಯಾನರ್​​ಗಳನ್ನು ಶಾಲಾ ಮಕ್ಕಳ ದೈನಂದಿನ ತಪಾಸಣೆಗಾಗಿ ಪಡೆದುಕೊಳ್ಳುವಂತೆ, ಹೆಚ್ಚಿನ ಅಗತ್ಯವಿದ್ದಲ್ಲಿ ಮತ್ತೊಂದನ್ನು ಖರೀದಿಸುವಂತೆ ಸೂಚಿಸಿದರು. ಈ ಬಾರಿಯ ಎಸ್ಸೆಸ್ಸೆಸಿ ಫಲಿತಾಂಶ ಮೊದಲ ಹತ್ತು ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಪಠ್ಯ ಬೋಧನೆಯನ್ನು ಪರಿಣಾಮಕಾರಿ ತಂತ್ರಗಳನ್ನು ಬಳಸಬೇಕು. ಬೋದನಾ ಕ್ರಮದಲ್ಲಿ ನಿರ್ಲಕ್ಷ ಬೇಡ. ನಡೆಯುವ ತರಗತಿಗಳು ಸಕಾಲಿಕವೂ, ವ್ಯವಸ್ಥಿತವೂ ಆಗಿರಲಿ. ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳಿಗೆ ಶ್ರವಣ, ಪಠಣ, ಓದು ಮತ್ತು ಬರಹ ಕೌಶಲಗಳನ್ನು ತಿಳಿಸುವುದರ ಜೊತೆಗೆ ಪೂರಕ ಪಠ್ಯವನ್ನು ಬೋಧಿಸುವಂತೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.