ETV Bharat / state

ಜಗದ ಎಲ್ಲಾ ರೋಗ ರುಜಿನಗಳಿಗೆ ಶಿಕ್ಷಣ ಮದ್ದು: ರವಿ ಡಿ ಚನ್ನಣ್ಣನವರ್

ಸಾಧಿಸಲು ಬಯಸುವವರು ಜಗತ್ತನ್ನು ಸಂತೋಷ ಪಡಿಸಲಲ್ಲ ಆತ್ಮತೃಪ್ತಿಗಾಗಿ ಕೆಲಸ ಮಾಡಿ ಎಂದು ಐಪಿಎಸ್​ ಅಧಿಕಾರಿ ರವಿ ಡಿ ಚನ್ನಣ್ಣವರ್​ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

Ravi D Channannavar Talked in Workshop
ಮಾಹಿತಿ ಕಾರ್ಯಾಗಾರದಲ್ಲಿ ರವಿ ಡಿ ಚನ್ನಣ್ಣನವರ್ ಮಾತನಾಡಿದರು
author img

By

Published : Feb 4, 2023, 7:28 AM IST

ಶಿವಮೊಗ್ಗ: ಜಗದ ಎಲ್ಲಾ ರೋಗ ರುಜಿನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೋನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ ಡಿ ಚನ್ನಣ್ಣನವರ್ ಅಭಿಪ್ರಾಯ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೋಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯವಾದದ್ದು. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜೀವನದಲ್ಲಿ ಏನೇ ಸಾಧನೆ ಸಾಧ್ಯವಾಗುತ್ತದೆ ಎಂದಾದರೇ ಅದು ನಮ್ಮ ಓದಿನ ಹಪಾಹಪಿಯಿಂದ ಮಾತ್ರ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ ಎಂದರು.

ನಮ್ಮೂರಿನ ಹಳ್ಳಿಯ ಶಾಲೆಯಿಂದ ಪದವಿಗೆ ತಲುಪಲು ಸಾಧ್ಯವಾಗಿದ್ದು ಕೆಲವೇ ಕೆಲವರಿಗೆ ಮಾತ್ರ. ವಿದ್ಯಾರ್ಥಿಯಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಸಾಧಕನಾಗ ಬಯಸುವವರಿಗೆ ಜಗತ್ತನ್ನು ಸಂತೋಷ ಪಡಿಸುವ ತೊಂದರೆ ಬೇಡ, ನಿಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡಿ. ಅದಕ್ಕಾಗಿ ವಿವೇಕ ಚೂಡಾಮಣಿಯಂತಹ ಪುಸ್ತಕಗಳ ಅಧ್ಯಯನ ನಡೆಸಿ. ನಮ್ಮ ಚಂದನವನ ಸದಾಚಾರಗಳ ಚಂದನವನವಾಗಿರಬೇಕು. ಆಂತರಿಕ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಉತ್ತಮ ವಿದ್ಯಾರ್ಥಿಯ ಪ್ರಮುಖ ಗುಣಲಕ್ಷಣಗಳೆಂದರೇ ಗ್ರಹಿಕೆ, ಕೇಳುವಿಕೆ ಮತ್ತು ಬರೆಯುವಿಕೆ. ಈ ಗುಣಲಕ್ಷಣಗಳೊಂದಿಗೆ ನಿರಂತರ ಕಲಿಕೆ ನಿಮ್ಮದಾಗಲಿ ಎಂದರು.

ಈ ಜಗತ್ತಿನಲ್ಲಿ ಪೊಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ನನಗೆ ಎರಡನೇ ಜನ್ಮ ಕೊಟ್ಟ ಶಿವಮೊಗ್ಗ: ಇಡೀ ಕರ್ನಾಟಕಕ್ಕೆ ರವಿ ಚನ್ನಣ್ಣನವರ್ ಯಾರು ಎಂದು ಪರಿಚಯಿಸಿದ್ದು ಶಿವಮೊಗ್ಗ ಜಿಲ್ಲೆ. ಇಲ್ಲಿ ಕೆಲಸ ಮಾಡಿದ ಪ್ರತಿ ದಿನವೂ ಸಂಭ್ರಮವೇ ಆಗಿತ್ತು. ಶಿವಮೊಗ್ಗ ಜಿಲ್ಲೆ ನನಗೆ ಎರಡನೇ ಜನ್ಮ ಕೊಟ್ಟ ಪುಣ್ಯ ಭೂಮಿ ಎಂದು ಸ್ಮರಿಸಿದರು.

ಕಿಯೋನಿಕ್ಸ್​ನಿಂದ ವಿವಿಧ ಕೋರ್ಸ್: ಕಿಯೋನಿಕ್ಸ್ ಸಂಸ್ಥೆ ಐಐಟಿ, ಐಐಎಂ ಪ್ರೊಫೆಸರ್​ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್‌ಗಳನ್ನು ಒದಗಿಸುತ್ತಿದೆ. ಜೊತೆಗೆ ಉನ್ನತ ಉದ್ಯೋಗವಕಾಶಗಳನ್ನು ಕೋರ್ಸ್ ಮುಗಿಸಿದ ವಿದ್ಯಾರ್ಥಿಗೆ ನೀಡಲಾಗುತ್ತದೆ. ಈ ಮೂಲಕ ಸಾಮಾನ್ಯ ಮತ್ತು ಗ್ರಾಮೀಣ ಪ್ರದೇಶದ ಯುವ ಸಮೂಹದ ಸಬಲೀಕರಣ ಸಾಧ್ಯವಾಗಲಿದೆ. ಕಿಯೋನಿಕ್ಸ್ ಪೂರಕ ವೇದಿಕೆಗಳನ್ನು ಬಳಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕ ಕುಮಾರ್ ಪಿ, ಕೋರ್ಸ್ ನಿರ್ದೇಶಕ ಡಾ.ಸರೀತ್ ಕುಮಾರ್, ಜೆ.ಎನ್.ಎನ್ ಕಾಲೇಜು ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮನುಷ್ಯನನ್ನು ಸೋಲಿಸುವ ವಸ್ತು ಇನ್ನು ಸೃಷ್ಟಿಯಾಗಿಲ್ಲ: ವಿದ್ಯಾರ್ಥಿಗಳಿಗೆ ರವಿ ಚನ್ನಣ್ಣನವರ್ ಕಿವಿಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.