ETV Bharat / state

ಮತದಾನ, ಮತ ಎಣಿಕೆ ದಿನದಂದು ನಿಷೇಧಾಜ್ಞೆ.. ಅಂಬೇಡ್ಕರ್​, ಬಾಬು ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ನಿರ್ಧಾರ - ಶಿವಮೊಗ್ಗ ಸುದ್ದಿ,

ಮತದಾನ ಮತ್ತು ಮತ ಎಣಿಕೆ ದಿನದಂದು ಚುನಾವಣಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

prohibition issued, prohibition issued on Election and voting day, prohibition issued on Election and voting day in Shivamogga, Shivamogga news, Shivamogga election news, ಚುನಾವಣೆ ಮತ್ತು ಮತ ಎಣಿಕೆ ದಿನದಂದು ನಿಷೇಧಾಜ್ಞೆ ಜಾರಿ, ಶಿವಮೊಗ್ಗದಲ್ಲಿ ಚುನಾವಣೆ ಮತ್ತು ಮತ ಎಣಿಕೆ ದಿನದಂದು ನಿಷೇಧಾಜ್ಞೆ ಜಾರಿ, ಶಿವಮೊಗ್ಗ ಸುದ್ದಿ, ಶಿವಮೊಗ್ಗ ಚುನಾವಣೆ ಸುದ್ದಿ,
ಅಂಬೇಡ್ಕರ್​, ಬಾಬು ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ನಿರ್ಧಾರ
author img

By

Published : Mar 26, 2021, 9:53 AM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪುರಸಭೆ, ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಮತ್ತು ವೀರಾಪುರ, ಶಿಕಾರಿಪುರ ತಾಲೂಕಿನ ಚುರ್ಚುಗುಂಡಿ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿಗಳ ಮತದಾನ ಹಾಗೂ ಮತ ಎಣಿಕೆ ದಿನದಂದು ಚುನಾವಣಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಅಂಬೇಡ್ಕರ್​, ಬಾಬು ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ನಿರ್ಧಾರ

ಶಿಕಾರಿಪುರ ಪುರಸಭೆ ಸೇರಿದಂತೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮಕ್ಕಾಗಿ ಮತದಾನದ ಸ್ಥಳಗಳಲ್ಲಿ ಮಾರ್ಚ್ 27ರ ಸಂಜೆ 05 ಗಂಟೆಯಿಂದ ಮಾರ್ಚ್ 29ರ ಸಂಜೆ 05 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅದೇ ರೀತಿ ಮತ ಎಣಿಕೆ ನಡೆಯುವ ದಿನಾಂಕ 31 ರಂದು ಭದ್ರಾವತಿ, ಶಿಕಾರಿಪುರ ತಾಲೂಕು ಕೇಂದ್ರಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆಯ ಕೇಂದ್ರದ 100 ಮೀಟರ್ ವರೆಗೆ ಮಾರ್ಚ್ 31ರ ಬೆಳಗ್ಗೆ 06 ಗಂಟೆಯಿಂದ ಏಪ್ರಿಲ್ 01ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.

ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ಕೋವಿಡ್ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಯಂತಿ ಅಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಜಯಂತಿಗಳನ್ನು ಸರಳವಾಗಿ ಆಚರಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತದ ವತಿಯಿಂದ ಯಾವುದೇ ಮೆರವಣಿಗೆಗಳಿಗೆ ಅವಕಾಶವಿರುವುದಿಲ್ಲ. ಜಿಲ್ಲಾಡಳಿತದ ನೂತನ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಏಪ್ರಿಲ್ 5ರಂದು ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಜಯಂತಿ ಹಾಗೂ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ನಡೆಯಲಿದೆ. ಮಹನೀಯರ ಭಾವಚಿತ್ರಗಳಿಗೆ ಗೌರವ ಸಮರ್ಪಿಸಿ ಸಭಾ ಕಾರ್ಯಕ್ರಮ ನಡೆಯಲಿದೆ. ಅವರ ಜೀವನದ ಸಮಗ್ರ ಮಾಹಿತಿಯನ್ನು ನೀಡುವ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ಸಭಾ ಕಾರ್ಯಕ್ರಮವನ್ನು ಶಿಷ್ಟಾಚಾರ ಪ್ರಕಾರ ನಡೆಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಸಭಾ ಕಾರ್ಯಕ್ರಮದ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ಆಯ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಪಾಹಾರ ವ್ಯವಸ್ಥೆ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.

ಅಪರ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೇಖರ್ ಹೆಚ್.ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಸಲಹೆ ಅಭಿಪ್ರಾಯಗಳನ್ನು ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.