ETV Bharat / state

ಮತದಾನಕ್ಕೆ ಕ್ಷಣಗಣನೆ: ಮತ ಕೇಂದ್ರಗಳಿಗೆ ತೆರಳುತ್ತಿರುವ ಚುನಾವಣಾ ಸಿಬ್ಬಂದಿ - ಮತ ಎಣಿಕೆ

ಜಿಲ್ಲೆಯಲ್ಲಿ ಒಟ್ಟು 2616 ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಚುನಾವಣಾ ಕಾರ್ಯಕ್ಕಾಗಿ ಒಟ್ಟು 222 ವಾಹನಗಳನ್ನು ಬಳಸಲಾಗುತ್ತಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಆಯಾ ತಾಲೂಕು ಕೇಂದ್ರದಿಂದ ಸಿಬ್ಬಂದಿ ಮತಪಟ್ಟಿಗೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

election
election
author img

By

Published : Dec 21, 2020, 3:37 PM IST

Updated : Dec 21, 2020, 3:58 PM IST

ಶಿವಮೊಗ್ಗ: ನಾಳೆ ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ. ನಗರದ ಎನ್‍.ಇ.ಎಸ್. ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿ ತೆರಳಿದರು. ಮೊದಲ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿಗಳಲ್ಲಿ ಹಾಗೂ ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ.

ಮತದಾನ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ. ಚುನಾವಣಾ ಆಯೋಗ ನಿಗದಿಪಡಿಸಿರುವ ಭಾವಚಿತ್ರವಿರುವ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ.

ಮತ ಕೇಂದ್ರಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ

ಮತಗಟ್ಟೆ, ಸಿಬ್ಬಂದಿ ವಿವರ:

ಜಿಲ್ಲೆಯಲ್ಲಿ ಒಟ್ಟು 2616 ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಒಟ್ಟು 956, ಭದ್ರಾವತಿ 816 ಮತ್ತು ತೀರ್ಥಹಳ್ಳಿಯಲ್ಲಿ ಒಟ್ಟು 844 ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಚುನಾವಣಾ ಕಾರ್ಯಕ್ಕಾಗಿ ಒಟ್ಟು 222 ವಾಹನಗಳನ್ನು ಬಳಸಲಾಗುತ್ತಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಆಯಾ ತಾಲೂಕು ಕೇಂದ್ರದಿಂದ ಸಿಬ್ಬಂದಿ ಮತಪಟ್ಟಿಗೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

election-preparations-in-shimogga
ಮತ ಕೇಂದ್ರಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ

ಮತದಾರರ ವಿವರ:

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯತ್‍ಗಳಲ್ಲಿ 457 ಸ್ಥಾನಗಳಿದ್ದು, 223 ಮತಗಟ್ಟೆಗಳಿವೆ. ಭದ್ರಾವತಿ ತಾಲೂಕಿನ 35 ಗ್ರಾ.ಪಂಗಳಲ್ಲಿ 419 ಸ್ಥಾನಗಳಿದ್ದು, 199 ಮತಗಟ್ಟೆಗಳಿವೆ. ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯತ್‍ಗಳಲ್ಲಿ 336 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 193 ಮತಗಟ್ಟೆಗಳಿವೆ.

ಶಿವಮೊಗ್ಗ ತಾಲೂಕಿನಲ್ಲಿ 69,860 ಪುರುಷ ಮತದಾರರು, 70,212 ಮಹಿಳಾ ಮತದಾರರು ಸೇರಿ 1,40,072 ಮತದಾರರು ಇದ್ದಾರೆ. ಭದ್ರಾವತಿ ತಾಲೂಕಿನಲ್ಲಿ 58,783 ಪುರುಷ, 60,442 ಮಹಿಳೆಯರು ಸೇರಿ 1,19,225 ಮತದಾರರು ಇದ್ದಾರೆ. ತೀರ್ಥಹಳ್ಳಿಯಲ್ಲಿ 54,076 ಪುರುಷ, 55,314 ಮಹಿಳೆಯರು ಸೇರಿ 1,09,390 ಮತದಾರರು ಇದ್ದಾರೆ. ಒಟ್ಟಾರೆಯಾಗಿ ಮೊದಲ ಹಂತದಲ್ಲಿ 1,83,911 ಪುರುಷರು ಮತ್ತು 1,87,476 ಮಹಿಳೆಯರು ಸೇರಿ 3,71,387 ಮಂದಿ ಮತದಾನ ಮಾಡಲಿದ್ದಾರೆ.

ಮತ ಎಣಿಕೆ:

ಡಿಸೆಂಬರ್ 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆಯು ಶ್ರೀ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ಭದ್ರಾವತಿಯ ಸಂಚಿ ಹೊನ್ನಮ್ಮ ಬಾಲಕಿಯರ ಕಾಲೇಜು, ತೀರ್ಥಹಳ್ಳಿಯ ಡಾ. ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢ ಶಾಲೆ, ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೊಬರದ‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಹೊಸನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

Last Updated : Dec 21, 2020, 3:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.