ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆ ಅಡಿ ಒಂದು ಕುಟುಂಬಕ್ಕೆ ಒಂದೇ ಕಾರ್ಡ್ ಎಂಬ ನಿರ್ಬಂಧವಿಲ್ಲ. ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ಅವರಿಗೆಲ್ಲ ಕಾರ್ಡ್ ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
![Eligible persons got job card](https://etvbharatimages.akamaized.net/etvbharat/prod-images/kn-smg-06-kse-siddureaction-7204213_08052020141158_0805f_1588927318_635.jpg)
ಒಂದು ಕುಟುಂಬಕ್ಕೆ ಒಂದೇ ಜಾಬ್ ಕಾರ್ಡ್ ನೀಡುತ್ತಿದ್ದಾರೆ ಎಂದು ಈಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಸಿದ್ದರಾಮಯ್ಯನವರು ನರೇಗಾ ಯೋಜನೆ ಬಗ್ಗೆ ತಪ್ಪು ತಿಳಿದುಕೊಂಡಿದ್ದಾರೆ. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟನೆ ನೀಡಿದರು.