ETV Bharat / state

ಶಿವಮೊಗ್ಗದ ಎಲ್ಲಾ ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ: ಸಚಿವ ಈಶ್ವರಪ್ಪ - ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿ

271 ಗ್ರಾಮ ಪಂಚಾಯತ್‍ಗಳ ಪೈಕಿ ನಾಲ್ಕು ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯಾರಂಭ ಮಾಡಿದ್ದು, ಇನ್ನು 17 ಗ್ರಾಪಂ ವ್ಯಾಪ್ತಿಗಳಲ್ಲಿ ಜಮೀನು ಗುರುತಿಸಿ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ​

KS eshwarappa
ಸಚಿವ ಈಶ್ವರಪ್ಪ
author img

By

Published : Jan 2, 2020, 5:32 PM IST

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಘನತ್ಯಾಜ್ಯ ಘಟಕ ಸ್ಥಾಪಿಸಲು ಜನವರಿ ಅಂತ್ಯದ ಒಳಗಾಗಿ ಭೂಮಿ ಗುರುತಿಸಿ ಅಂತಿಮಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ ನಾಲ್ಕು ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯಾರಂಭ ಮಾಡಿದ್ದು, ಇನ್ನು 17 ಗ್ರಾಪಂ ವ್ಯಾಪ್ತಿಗಳಲ್ಲಿ ಜಮೀನು ಗುರುತಿಸಿ ಅನುಮತಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯ ಪ್ರಗತಿಯಾಗಿದ್ದು, ನಮ್ಮ ಜಿಲ್ಲೆಯಲ್ಲಿ ತಿಂಗಳ ಅಂತ್ಯದ ಒಳಗಾಗಿ ಜಮೀನು ಗುರುತಿಸಿ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ

ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ 2ರಿಂದ 5 ಎಕರೆ ಜಮೀನು ಅಗತ್ಯವಿದೆ. ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಪ್ರತಿ ಗ್ರಾಮ ಪಂಚಾಯತ್‍ಗಳಿಗೆ 20 ಲಕ್ಷ ರೂ. ಅನುದಾನ ಈಗಾಗಲೇ ಒದಗಿಸಿದೆ. ಸೂಕ್ತ ಜಮೀನು ಲಭ್ಯವಿಲ್ಲದ ಕಡೆಗಳಲ್ಲಿ ಮೂರು ನಾಲ್ಕು ಗ್ರಾಮ ಪಂಚಾಯತ್‍ಗಳು ಕ್ಲಸ್ಟರ್ ಮಾದರಿಯಲ್ಲಿ ಘಟಕಗಳನ್ನು ಸ್ಥಾಪಿಸಬಹುದಾಗಿದೆ. ಘನ ತ್ಯಾಜ್ಯ ಘಟಕಗಳನ್ನು ಆದಷ್ಟು ಬೇಗನೆ ಸ್ಥಾಪಿಸಲು ಭೂಮಿ ಒದಗಿಸಲು ತಹಶೀಲ್ದಾರ್​ಗಳು ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ

ಸೋಲಾರ್ ದೀಪಗಳ ಅಳವಡಿಕೆ:
ಇನ್ನು ಎಲ್ಲಾ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪ್ರಥಮ ಹಂತದಲ್ಲಿ ಗ್ರಾಮ ಪಂಚಾಯತ್ ಕಟ್ಟಡಗಳಿಗೆ ಸೋಲಾರ್ ದೀಪಗಳನ್ನು ಅಳವಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 35 ವಾರ್ಡ್‍ಗಳ ಪೈಕಿ 11 ವಾರ್ಡ್‍ಗಳಲ್ಲಿ ಮಾತ್ರ ಪ್ರಸ್ತುತ ವಿಂಗಡಿಸಿದ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ತಿಂಗಳ ಅಂತ್ಯದ ಒಳಗಾಗಿ ಎಲ್ಲಾ ವಾರ್ಡ್‍ಗಳಲ್ಲಿ ವಿಂಗಡಿಸಿದ ಕಸವನ್ನು ಪಡೆಯುವ ವ್ಯವಸ್ಥೆ ಮಾಡಬೇಕು. ಸ್ಥಳೀಯವಾಗಿ ವಾರ್ಡ್‍ಗಳಲ್ಲೇ ಅತ್ಯಾಧುನಿಕ ಕಸ ವಿಲೇವಾರಿ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ 63 ಶಾಲೆಗಳ ದುರಸ್ತಿಗೆ ಅನುದಾನ ಒದಗಿಸಲಾಗಿದ್ದು, ಒಂದು ವಾರದ ಒಳಗಾಗಿ ಕಾಮಗಾರಿ ಆರಂಭಿಸಬೇಕು ಎಂದರು.

Intro:ಶಿವಮೊಗ್ಗ

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ತಿಂಗಳ ಅಂತ್ಯದ ಒಳಗಾಗಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಮೀನು ಗುರುತಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಘನತ್ಯಾಜ್ಯ ಘಟಕ ಸ್ಥಾಪಿಸಲು ಜನವರಿ ಅಂತ್ಯದ ಒಳಗಾಗಿ ಭೂಮಿ ಗುರುತಿಸಿ ಅಂತಿಮಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ ನಾಲ್ಕು ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯಾರಂಭ ಮಾಡಿದ್ದು, ಇನ್ನು 17 ಗ್ರಾ.ಪಂ ವ್ಯಾಪ್ತಿಗಳಲ್ಲಿ ಜಮೀನು ಗುರುತಿಸಿ ಅನುಮತಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯದಲ್ಲಿ ಉತ್ತಮ ಪ್ರಗತಿಯಾಗಿದ್ದು, ನಮ್ಮ ಜಿಲ್ಲೆಯಲ್ಲಿ ತಿಂಗಳ ಅಂತ್ಯದ ಒಳಗಾಗಿ ಜಮೀನು ಗುರುತಿಸಿ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ

ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ 2ರಿಂದ 5ಎಕ್ರೆ ಜಮೀನು ಅಗತ್ಯವಿದೆ. ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಪ್ರತಿ ಗ್ರಾಮ ಪಂಚಾಯತ್‍ಗಳಿಗೆ 20ಲಕ್ಷ ರೂ. ಅನುದಾನ ಈಗಾಗಲೇ ಒದಗಿಸಿದೆ. ಸೂಕ್ತ ಜಮೀನು ಲಭ್ಯವಿಲ್ಲದ ಕಡೆಗಳಲ್ಲಿ ಮೂರು ನಾಲ್ಕು ಗ್ರಾಮ ಪಂಚಾಯತ್‍ಗಳು ಕ್ಲಸ್ಟರ್ ಮಾದರಿಯಲ್ಲಿ ಘಟಕಗಳನ್ನು ಸ್ಥಾಪಿಸಬಹುದಾಗಿದೆ. ಘನ ತ್ಯಾಜ್ಯ ಘಟಕಗಳನ್ನು ಆದಷ್ಟು ಬೇಗನೆ ಸ್ಥಾಪಿಸಲು ಭೂಮಿ ಒದಗಿಸಲು ತಹಶೀಲ್ದಾರ್‍ಗಳು ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ

ಸೋಲಾರ್ ದೀಪಗಳ ಅಳವಡಿಕೆ: ಎಲ್ಲಾ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪ್ರಥಮ ಹಂತದಲ್ಲಿ ಗ್ರಾಮ ಪಂಚಾಯತ್ ಕಟ್ಟಡಗಳಿಗೆ ಸೋಲಾರ್ ದೀಪಗಳನ್ನು ಅಳವಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 35ವಾರ್ಡ್‍ಗಳ ಪೈಕಿ 11ವಾರ್ಡ್‍ಗಳಲ್ಲಿ ಮಾತ್ರ ಪ್ರಸ್ತುತ ವಿಂಗಡಿಸಿದ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ತಿಂಗಳ ಅಂತ್ಯದ ಒಳಗಾಗಿ ಎಲ್ಲಾ ವಾರ್ಡ್‍ಗಳಲ್ಲಿ ವಿಂಗಡಿಸಿದ ಕಸವನ್ನು ಪಡೆಯುವ ವ್ಯವಸ್ಥೆ ಮಾಡಬೇಕು. ಸ್ಥಳೀಯವಾಗಿ ವಾರ್ಡ್‍ಗಳಲ್ಲೇ ಅತ್ಯಾಧುನಿಕ ಕಸ ವಿಲೇವಾರಿ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ 63ಶಾಲೆಗಳ ದುರಸ್ತಿಗೆ ಅನುದಾನ ಒದಗಿಸಲಾಗಿದ್ದು, ಒಂದು ವಾರದ ಒಳಗಾಗಿ ಕಾಮಗಾರಿ ಆರಂಭಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ನಗರ ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ಮೇಯರ್ ಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.