ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತಿ ಮುಖ್ಯವಾಗಿದ್ದು, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಮುರುಘಾಮಠದ ಪೀಠಾಧಿಪತಿಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕರೆ ನೀಡಿದ್ದಾರೆ.
ಸಾಗರ ತಾಲೂಕಿನ ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಮುರುಘಾಮಠದ ಶ್ರೀಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮತದಾನ ಮಾಡಿದರು. ಮತದಾನ ಎಲ್ಲರ ಹಕ್ಕು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕೆಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ದೇವರ ಬೆಳಕೆರೆಯಲ್ಲಿ ಹುಮ್ಮಸ್ಸಿನಿಂದಲೇ ಮತದಾನ ಮಾಡಿದ ಮೂವರು ಶತಾಯುಷಿಗಳು..
ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದರಿಂದ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ನೀಡುವುದರೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಆದರೆ ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದೆಂದು ತಿಳಿಸಿದರು.