ETV Bharat / state

ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ.. ಅಂದಾಜು ₹5 ಲಕ್ಷ ಮೌಲ್ಯದ ಗಾಂಜಾ ಗಿಡಗಳು ವಶ

author img

By

Published : Sep 22, 2020, 7:11 PM IST

ರೈತರಿಗೆ ಹಣದ ಆಮಿಷವೊಡ್ಡಿ, ಗಾಂಜಾ ಬೆಳೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ..

ಗಾಂಜಾ ವಶ
ಗಾಂಜಾ ವಶ

ಶಿವಮೊಗ್ಗ : ಶುಂಠಿ ಜೊತೆಗೆ ಬೆಳೆದಿದ್ದ 200 ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದ ಘಟನೆ ಸೊರಬ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿನ ಬಗರ್ ಹುಕುಂ ಜಮೀನಿನಲ್ಲಿ ಸಹೋದರರಾದ ಗಂಗಾಧರಪ್ಪ, ಪರಶುರಾಮಪ್ಪ ಹಾಗೂ ಹುಚ್ಚರಾಯಪ್ಪ ಎಂಬುವರು ಶುಂಠಿ ಬೆಳೆಯ ಮಧ್ಯದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಈ ಕುರಿತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.

ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ

200 ಗಾಂಜಾ ಗಿಡಗಳ ಬೆಲೆ ಸುಮಾರು 5.50 ಲಕ್ಷ ರೂ. ಎನ್ನಲಾಗಿದೆ. ದಾಳಿಯಲ್ಲಿ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಹನುಂಮತಪ್ಪ, ಅಬಕಾರಿ ಉಪ ನಿರೀಕ್ಷಕ ಜಾನ್ ಸೇರಿ 30ಕ್ಕೂ ಅಧಿಕ ಅಧಿಕಾರಿಗಳು ಭಾಗಿಯಾಗಿದ್ದರು. ರೈತರಿಗೆ ಹಣದ ಆಮಿಷವೊಡ್ಡಿ, ಗಾಂಜಾ ಬೆಳೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.