ಶಿವಮೊಗ್ಗ: ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದ 3 ಮದ್ಯದಂಗಡಿಗಳ ಮೇಲೆ ಅಬಕಾರಿ ಉಪಆಯುಕ್ತ ಕ್ಯಾಪ್ಟನ್ ಅಜಿತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ತೀರ್ಥಹಳ್ಳಿ ಉಪ ವಿಭಾಗದಲ್ಲಿ ಎಂಆರ್ಪಿ ದರಕ್ಕಿಂತ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದ ಕುರಿತು ದೂರುಗಳು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಎಂಆರ್ಪಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಮೂರು ಅಂಗಡಿಗಳ ಮೇಲೆ ದಾಳಿ ನಡೆಸಿದ ಉಪಆಯುಕ್ತ ಕ್ಯಾಪ್ಟನ್ ಅಜೀತ್ ಹಾಗೂ ಸಿಬ್ಬಂದಿ ದೂರು ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಅಬಕಾರಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕ್ಯಾಪ್ಟನ್ ಅಜಿತ್ ತಿಳಿಸಿದ್ದಾರೆ.