ETV Bharat / state

ಮೆಸ್ಕಾಂ ನಿರ್ಲಕ್ಷ್ಯ ಆರೋಪ: ವಿದ್ಯುತ್ ತಂತಿ ತುಳಿದು ರೈತ ಸಾವು - ETV Bharath Kannada

ಹೂವು ಕೀಳಲು ತೆರಳಿದ ವೇಳೆ ಕೆಳಕ್ಕೆ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

farmer died  Due to MESCOM negligence
ವಿದ್ಯುತ್ ತಂತಿ ತುಳಿದು ರೈತ ಸಾವು
author img

By

Published : Dec 12, 2022, 2:09 PM IST

ಶಿವಮೊಗ್ಗ: ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತ‌ನನ್ನು ಶೇಷಗಿರಿ (45) ಎಂದು ಗುರುತಿಸಲಾಗಿದೆ.

ಇಂದು ತಮ್ಮ ನಿವಾಸದ ಎದುರು ಶೇಷಗಿರಿ ಪತ್ನಿ ಹೂವು ಕೀಳಲು ತೆರಳಿದ್ದರು. ಈ ವೇಳೆ ಪತ್ನಿಗೆ ವಿದ್ಯುತ್ ಸ್ಪರ್ಶಿಸಿ, ಕೂಗಿಕೊಂಡಿದ್ದಾರೆ. ಪತ್ನಿಯನ್ನು ರಕ್ಷಿಸಲು ಹೋದ ಪತಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತುಂಡಾಗಿ ಈ ಹಿಂದೆಯೇ ತಂತಿ ಬೇಲಿ‌ ಮೇಲೆ ಬಿದ್ದಿತ್ತು. ಈ ಬಗ್ಗೆ ಮೃತ ಶೇಷಗಿರಿ ಮೂರು ಬಾರಿ ಮೆಸ್ಕಾಂನವರಿಗೆ ಫೋನ್ ಮಾಡಿ ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದರಂತೆ.

ಆದರೆ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗ ದಾನ.. ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.