ಶಿವಮೊಗ್ಗ: ರೈತ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಬೇಡರ ಹೊಸಳ್ಳಿ ಬಳಿ ರೈತರು ರಸ್ತೆಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ ಎಂಬ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು 10ಕ್ಕೂ ಹೆಚ್ಚು ರೈತರನ್ನು ಬಂಧಿಸಿದ್ದಾರೆ.
ನಮ್ಮ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಧ್ವಜ ಬೇಡವೆಂದ ಶಿಕಾರಿಪುರ ರೈತ ಸಂಘ:
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ರೈತ ಸಂಘ ಪ್ರತಿಭಟನೆ ನಡೆಸುತ್ತಿರುವ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಈ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಯತ್ನಿಸಿದ್ದರು. ಇದಕ್ಕೆ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ ರೈತ ಸಂಘ, ನಾವು ಪೊಲೀಸರ ಅನುಮತಿ ಪಡೆದು ಪ್ರತಿಭಟನೆ ನಡೆಸುತ್ತಿದ್ದೇವೆ, ನೀವು ನಿಮ್ಮ ಕಾಂಗ್ರೆಸ್ ಪಕ್ಷದ ಧ್ವಜ ಬಿಟ್ಟು ನಮ್ಮ ಪ್ರತಿಭಟನೆಗೆ ಬನ್ನಿ ಎಂದು ತಿಳಿಸಿದ್ದಾರೆ.
ಭದ್ರಾವತಿಯಲ್ಲಿಯೂ ಸಹ ಕರವೇ ಸೇರಿದಂತೆ ವಿವಿಧ ಸಂಘಟನೆಗಳಗಳು ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿದ್ದವು. ನಗರದಲ್ಲಿ ಮೆರವಣಿಗೆ ನಡೆಸಿ, ಅಂಡರ್ ಪಾಸ್ ಬಳಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.