ETV Bharat / state

ಯತ್ನಾಳ್​ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ರೈತ ಸಂಘದಿಂದ ಪ್ರತಿಭಟನೆ - shimogga protest latest news

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನಕಲಿ ಸ್ವಾತಂತ್ರ್ಯ ಹೋರಾಟಗಾರ. ಅವರೊಬ್ಬ ಕಾಂಗ್ರೆಸ್‌ ಏಜೆಂಟ್ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿ ನಗರದಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿದೆ.

Farmers' union protest in Shimoga
ಯತ್ನಾಳ್ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ರೈತ ಸಂಘದಿಂದ ಪ್ರತಿಭಟನೆ!
author img

By

Published : Feb 27, 2020, 5:35 PM IST

ಶಿವಮೊಗ್ಗ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿಕೆ ಖಂಡಿಸಿ ನಗರದಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿದೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ಪಕ್ಷಾತೀತವಾಗಿ ಇರುವಂತವರು. ಅಂತಹವರನ್ನು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರೊಬ್ಬ ಕಾಂಗ್ರೆಸ್‌ ಏಜೆಂಟ್ ಎಂದು ಹೇಳಿಕೆ ನೀಡಿ‌ ಅಪಮಾನ ಮಾಡಿದ್ದಾರೆ. ಹಾಗಾಗಿ ಯತ್ನಾಳ್​ ಅವರು ತಕ್ಷಣ ದೊರೆಸ್ವಾಮಿ ಹಾಗೂ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಯತ್ನಾಳ್ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ರೈತ ಸಂಘದಿಂದ ಪ್ರತಿಭಟನೆ

ದೊರೆಸ್ವಾಮಿಯವರು ಗಾಂಧಿ ತತ್ವದಡಿ ಜೀವನ ನಡೆಸಿಕೊಂಡು ಬಂದಂತಹವರು. ಅವರು ಸಂವಿಧಾನದ‌ ಆಶಯಗಳಿಗೆ ಬದ್ಧರಾಗಿ ನುಡಿದಂತೆ ನಡೆಯುತ್ತಿರುವವರು. ಅವರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.