ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘದ ವತಿಯಿಂದ ನಗರದ ಟಿ.ಎಸ್.ಶೀನಪ್ಪ ಶೆಟ್ಟಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರ ನೇತೃತ್ವದಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿದೆ. ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ, ರೈತರನ್ನು ಬೀದಿ ಪಾಲು ಮಾಡಲು ಹೊರಟಿದೆ.
ಇದು ಖಂಡನೀಯ. ತಕ್ಷಣ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.