ETV Bharat / state

ಶಿವಮೊಗ್ಗ: ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ಗೆ ಜಿಲ್ಲಾಡಳಿತದಿಂದ ಸನ್ಮಾನ - District Collector K B Sivakumar

'ನಾನು ಶಿವಮೊಗ್ಗದವಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಅನ್ನಿಸುತ್ತಿದೆ. ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ ತಂಡದ ಭಾಗವಾಗಿದ್ದು ಅವಿಸ್ಮರಣೀಯ ಅನುಭವ' ಎಂದು ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಅಂಕಿತಾ ಬಿ.ಎಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

felicitation-for-womens-hockey-team-assistant-coach-in-shimoga
ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ಗೆ ಜಿಲ್ಲಾಡಳಿತದಿಂದ ಸನ್ಮಾನ
author img

By

Published : Sep 6, 2021, 6:23 PM IST

Updated : Sep 6, 2021, 6:40 PM IST

ಶಿವಮೊಗ್ಗ: ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ ಬಿ. ಎಸ್ ಅವರನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಂದು ಅಭಿನಂದಿಸಿದರು.

ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್ ತಲುಪಿದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ತಾವು ಶಿವಮೊಗ್ಗ ಮೂಲದವರು ಎಂಬುದು ಜಿಲ್ಲೆಯ ಹೆಮ್ಮೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ಹಾರೈಸಿದರು.

ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ಗೆ ಜಿಲ್ಲಾಡಳಿತದಿಂದ ಸನ್ಮಾನ

ಈ ಸಂದರ್ಭದಲ್ಲಿ ಮಾತನಾಡಿದ ಅಂಕಿತಾ,​ 'ನಾನು ಶಿವಮೊಗ್ಗದವಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಅನ್ನಿಸುತ್ತಿದೆ. ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ ತಂಡದ ಭಾಗವಾಗಿದ್ದು ಅವಿಸ್ಮರಣೀಯ ಅನುಭವ. ಶಿವಮೊಗ್ಗದಲ್ಲಿ ಪ್ರತಿಭಾವಂತ ಹಾಕಿ ಆಟಗಾರರು ಇದ್ದಾರೆ. ಕೆಲವರು ರಾಷ್ಟ್ರೀಯ ಮಟ್ಟದಲ್ಲೂ ಪ್ರತಿನಿಧಿಸುತ್ತಿದ್ದಾರೆ. ಇನ್ನಷ್ಟು ಪ್ರತಿಭೆಗಳನ್ನು ಗುರುತಿಸಿ ತರಬೇತಿ ನೀಡುವ ಗುರಿ ಇದೆ. ಶಿವಮೊಗ್ಗದಲ್ಲಿ ಉತ್ತಮ ಹಾಕಿ ಮೈದಾನ ಸೌಲಭ್ಯ ಕಲ್ಪಿಸಿದರೆ ಉತ್ತಮ ಆಟಗಾರರನ್ನು ಹೊರತರಲು ಸಾಧ್ಯವಿದೆ' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಅಂಕಿತಾ ಅವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ: ಮೈದಾನದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಕ್ರೀಡಾಪಟುಗಳ ವಿರೋಧ; ಇದೇನು ನಿಮ್ಮಪ್ಪನ ಆಸ್ತಿನಾ? ಎಂದು ಮಾಧುಸ್ವಾಮಿ ಗರಂ

Last Updated : Sep 6, 2021, 6:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.