ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾದಿಂದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದ ಸಿಗೆಹಟ್ಟಿಯ 68 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಇವರಿಗೆ ಸಕ್ಕರೆ ಕಾಯಿಲೆ ಇದ್ದ ಕಾರಣ, ಶನಿವಾರ ಬೆಳಗ್ಗೆ ಅನಾರೋಗ್ಯದಿಂದಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಫಲಿಸದೇ ವೃದ್ಧೆ ಮೃತಪಟ್ಟಿದ್ದಾರೆ. ಕೋವಿಡ್-19 ಮಾರ್ಗಸೊಚಿಯಂತೆ ಸ್ವಾಬ್ ಪರೀಕ್ಷೆ ನಡೆಸಿದಾಗ ಭಾನುವಾರ ಕೊರೊನಾ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ಕೊರೊನಾಗೆ ಇದು ಐದನೇ ಬಲಿಯಾಗಿದ್ದು, ಇದರಲ್ಲಿ ಶಿವಮೊಗ್ಗ ಜಿಲ್ಲೆಯವರು 3 ಜನ ಹಾಗೂ ಬೆರೆ ಜಿಲ್ಲೆಯವರು ಇಬ್ಬರು ಇದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಜಿಲ್ಲೆ ಜನತೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.