ಶಿವಮೊಗ್ಗ: ಶಿವಮೊಗ್ಗದ ಪ್ರಸಿದ್ಧ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಮಕ್ಕಳನ್ನು ನಗರದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಗುಡುಗಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ಹೇಳಲಾಗುತ್ತಿದ್ದು, ಅಗ್ನಿ ಅನಾಹುತದ ನಂತರ ಮೆಗ್ಗಾನ್ ಆಸ್ಪತ್ರೆಯ ನಿರ್ದೇಶಕರು ಹಾಗೂ ಜಿಲ್ಲಾ ಸರ್ಜನ್ ಜಿಲ್ಲಾಧಿಕಾರಿಗಳ ಒಪ್ಪಿಗೆಯ ಮೇರೆಗೆ 20ಕ್ಕೂ ಹೆಚ್ಚು ಮಕ್ಕಳು ಹಾಗೂ ತಾಯಂದಿರನ್ನು ನಗರದ ಸರ್ಜಿ ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.