ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್ನಿಂದ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೊಸನಗರ ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ.
ಕ್ರಿಶ್ಚಿಯನ್ ಕಾಲೋನಿಯ ಅಂಗಡಿ ಮುಂದೆ ರೆಹಮಾನ್ ಎಂಬುವರು ಕಾರನ್ನು ನಿಲ್ಲಿಸಿದ್ದರು. ಬಳಿಕ ನಿಲ್ಲಿಸಿದ್ದ ಕಾರನ್ನು ಸ್ಟಾರ್ಟ್ ಮಾಡಲು ಹೋದಾಗ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿ ಗ್ಯಾಸ್ಕಿಟ್ ಇದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.