ಶಿವಮೊಗ್ಗ : ತುಂಗಾ ನದಿ ಸೇತುವೆ ಮೇಲಿಂದ ಕಾಲು ಜಾರಿ ನದಿಗೆ ಬಿದ್ದಿದ್ದ ಯುವಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿರುವ ಘಟನೆ (ಭಾನುವಾರ) ಇಂದು ನಡೆದಿದೆ.
ನಗರದ ತುಂಗಾ ನದಿ ಸೇತುವೆ ಮೇಲಿಂದ ಕಾಲು ಜಾರಿ ತನ್ವೀರ್ ಎಂಬ ಯುವಕ ನದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ಕೂಡಲೇ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಕೋಟೆ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಯುವಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಗೆ ಬಿದ್ದಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅದೃಷ್ಟವಶಾತ್ ಆತನಿಗೆ ಯಾವುದೇ ಗಾಯಗಳಾಗಿಲ್ಲ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಬಾಗಲಕೋಟೆಯಲ್ಲಿ ದಸರಾ ಸಂಭ್ರಮ : ಮನೆಗಳಲ್ಲಿ ಗೊಂಬೆ ಕೂರಿಸಿ ಪ್ರದರ್ಶನ