ಶಿವಮೊಗ್ಗ: ಬಿಜೆಪಿಯ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ
ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ಮೂಲಕ ಗೌರವಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷ ದೊಡ್ಡ ಮಟ್ಟದಲ್ಲಿ ಬೆಳೆಯಲು ಎಲ್. ಕೆ. ಅಡ್ವಾಣಿ ಅವರ ಕೊಡುಗೆ ಬಹುದೊಡ್ಡದಾಗಿದೆ. ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಭಾರತ ರತ್ನ ನೀಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಪತ್ರದ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಅವರು 93 ನೇ ವಂಸತಕ್ಕೆ ಕಾಲಿಟ್ಟ ಎಲ್. ಕೆ. ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.