ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕುರುವಳ್ಳಿ ಬಂಡೆ ಹಂಚಿಕೆ ವಿಚಾರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿಯ ಬಂಡೆ ಹಂಚಿಕೆ ವಿಚಾರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು, ಗೃಹ ಸಚಿವರ ಅಣತಿಯಂತೆ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಬಂಡೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ನ್ಯಾಯ ಒದಗಿಸುವ ಬದಲು ಒಂದು ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಜೊತೆ ನಡೆದ ಮಾತುಕತೆ ವೇಳೆ ಅಧಿಕಾರಿಗಳು ಸರಿಯಾಗಿ ವರ್ತನೆ ಮಾಡದೇ ಇರುವುದನ್ನು ಖಂಡಿಸಿ ಉಪವಾಸ ಸತ್ಯಗ್ರಹ ನಡೆಸುತ್ತಿರುವುದಾಗಿ ರತ್ನಾಕರ್ ತಿಳಿಸಿದರು.
ಇಂದು ಬೆಳಗ್ಗೆಯಿಂದ ನಾಳೆ ಬೆಳಗ್ಗೆ ತನಕ ಉಪವಾಸ ಸತ್ಯಗ್ರಹ ನಡೆಯಲಿದ್ದು, ಉಪವಾಸ ಸತ್ಯಗ್ರಹದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಇದನ್ನೂ ಓದಿ: ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ ಇಂಗ್ಲೀಷ್'ಗೆ ಮಾತ್ರ ಅವಕಾಶ: ಕರವೇ ಪ್ರತಿಭಟನೆ